ದೇಶ

ಬಾಲಿವುಡ್ ನಟ, ಬಿಜೆಪಿ ಸಂಸದ ಸನ್ನಿ ಡಿಯೋಲ್'ಗೆ ಕೊರೋನಾ ಪಾಸಿಟಿವ್

Manjula VN

ಶಿಮ್ಲಾ; ಬಾಲಿವುಡ್ ನಟ ಹಾಗೂ ಬಿಜೆಪಿ ಸಂಸದ ಸನ್ನಿ ಡಿಯೋಲ್ ಅವರಿಗೆ ಕೊರೋನಾ ವೈರಸ್ ಸೋಂಕು ತಗುಲಿದೆ ಎಂದು ಬುಧವಾರ ತಿಳಿದುಬಂದಿದೆ. 

ಈ ಕುರಿತು ಹಿಮಾಚಲ ಪ್ರದೇಶದ ಆರೋಗ್ಯ ಕಾರ್ಯದರ್ಶಿ ಮಾಹಿತಿ ನೀಡಿದ್ದಾರೆ. ಸನ್ನಿ ಡಿಯೋಲ್ ಅವರಿಗೆ ಕೊರೋನಾ ವೈರಸ್ ತಗಲುಲಿದ್ದು, ಕೆಲ ದಿನಗಳ ಕಾಲ ಕುಲ್ಲು ಜಿಲ್ಲೆಯಲ್ಲಿ ಕ್ವಾರಂಟೈನ್'ನಲ್ಲಿ ಇರಿಸಲಿದ್ದಾರೆಂದು ಹೇಳಿದ್ದಾರೆ. 

ಇನ್ನು ಕೆಲವೇ ದಿನಗಳಲ್ಲಿ ಸನ್ನಿ ಡಿಯೋಲ್ ಹಾಗೂ ಅವರ ಸ್ನೇಹಿತರು ಮುಂಬೈಗೆ ಭೇಟಿ ನೀಡಲು ಮುಂದಾಗಿದ್ದರು. ಮಂಗಳವಾರ ಕೊರೋನಾ ಪರೀಕ್ಷೆಗೊಳಗಾದಾಗ ವರದಿಯಲ್ಲಿ ಪಾಸಿಟಿವ್ ಬಂದಿದೆ ಎಂದು ತಿಳಿಸಿದ್ದಾರೆ. 

SCROLL FOR NEXT