ತೃಪ್ತಿ ದೇಸಾಯಿ 
ದೇಶ

ಪೂಜಾರಿಗಳಿಗಿಲ್ಲದ ಸುಸಂಸ್ಕೃತ ಉಡುಗೆ ಕೇವಲ ಭಕ್ತರಿಗೆ ಮಾತ್ರ ಏಕೆ? ತೃಪ್ತಿ ದೇಸಾಯಿ

ಸುಸಂಸ್ಕೃತ ರೀತಿಯಲ್ಲಿ ವಸ್ತ್ರ ಧರಿಸಿ ಬರಬೇಕೆಂದು ಶಿರಡಿ ಸಾಯಿಬಾಬಾ ದೇವಾಲಯ ಟ್ರಸ್ಟ್ ಬೋರ್ಡ್ ಹಾಕಿರುವ ಹಿನ್ನೆಲೆಯಲ್ಲಿ ಸಾಮಾಜಿಕ ಕಾರ್ಯಕರ್ತೆ ತೃಪ್ತಿ ದೇಸಾಯಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಪುಣೆ: ಸುಸಂಸ್ಕೃತ ರೀತಿಯಲ್ಲಿ ವಸ್ತ್ರ ಧರಿಸಿ ಬರಬೇಕೆಂದು ಶಿರಡಿ ಸಾಯಿಬಾಬಾ ದೇವಾಲಯ ಟ್ರಸ್ಟ್ ಬೋರ್ಡ್ ಹಾಕಿರುವ ಹಿನ್ನೆಲೆಯಲ್ಲಿ ಸಾಮಾಜಿಕ ಕಾರ್ಯಕರ್ತೆ ತೃಪ್ತಿ ದೇಸಾಯಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಶಿರಡಿ ದೇವಾಲಯ ಇಂತಹ ಬೋರ್ಡ್ ಗಳನ್ನು ಹಾಕುವ ಮೂಲಕ ಭಕ್ತರ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ತಂದಿದೆ ಎಂದು  ತೃಪ್ತಿ ಅಸಮಾಧಾನ ಹೊರಹಾಕಿದ್ದಾರೆ, ಈ ಸಂಬಂಧ ವಿಡಿಯೋ ಸಂದೇಶ ರವಾನಿಸಿರುವ ಅವರು. ಶಿರಡಿ ದೇವಾಲಯದಲ್ಲಿ ಸುಸಂಸ್ಕೃತ ರೀತಿಯಲ್ಲಿ ಉಡುಗೆ ಧರಿಸಿ ಬರಬೇಕೆಂದು ಫಲಕಗಳನ್ನು ಹಾಕಲಾಗಿದೆ, ದೇವಾಲಯ ಟ್ರಸ್ಟ್ ಈ ಫಲಕಗಳನ್ನು ತೆಗೆಯದಿದ್ದರೇ ನಾವೇ ಶಿರಡಿಗೆ ಹೋಗಿ ಫಲಕಗಳನ್ನು ತೆಗೆದು ಹಾಕುವುದಾಗಿ ತಿಳಿಸಿದ್ದಾರೆ.

ದೇವಾಲಯಗಳ ಅರ್ಚಕರು ಮತ್ತು ಪೂಜಾರಿಗಳು ಅರ್ಧ ಬಟ್ಟೆ ಧರಿಸಿರುತ್ತಾರೆ, ಅವರಿಗಿಲ್ಲದ ವಸ್ತ್ರ ಸಂಹಿತೆ ಕೇವಲ ಭಕ್ತರಿಗೆ ಮಾತ್ರ ಏಕೆ ಎಂದು ಪ್ರಶ್ನಿಸಿದ್ದಾರೆ.ಇನ್ನೂ ಈ ಸಂಬಂಧ ಪ್ರತಿಕ್ರಿಯಿಸಿರುವ ಶಿರಡಿ ಸಾಯಿಬಾಬಾ ಸಂಸ್ಥಾನ ಟ್ರಸ್ಟ್ ನ ಸಿಇಓ, ಇದೊಂದು ಮನವಿ ಅಷ್ಟೇ, ದೇವಾಲಯಕ್ಕೆ ಬರುವವರಿಗೆ ಯಾವುದೇ ವಸ್ತ್ರ ಸಂಹಿತೆ ನಿಗದಿ ಪಡಿಸಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.

ಭಾರತದ ಸಂವಿಧಾನ ಪ್ರತಿಯೊಬ್ಬ ನಾಗರಿಕನಿಗೂ ಅವನಿಗಿಷ್ಟವಾದ ವಸ್ತ್ರ ಧರಿಸುವ ಹಕ್ಕು ನೀಡಿದೆ ಎಂದು ತೃಪ್ತಿ ದೇಸಾಯಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT