ದೇಶ

ಕೃಷಿ ಕಾನೂನುಗಳನ್ನು ವಿರೋಧಿಸಿ ಪದ್ಮ ವಿಭೂಷಣ ಪ್ರಶಸ್ತಿ ಹಿಂತಿರುಗಿಸಿದ ಪ್ರಕಾಶ್ ಸಿಂಗ್ ಬಾದಲ್

Lingaraj Badiger

ನವದೆಹಲಿ: ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ ತಮಗೆ ನೀಡಿದ್ದ ಪದ್ಮ ವಿಭೂಷಣ ಪ್ರಶಸ್ತಿಯನ್ನು ಅಕಾಲಿ ದಳದ ಹಿರಿಯ ನಾಯಕ ಮತ್ತು ಪಂಜಾಬ್ ಮಾಜಿ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ಕೇಂದ್ರ ಸರ್ಕಾರಕ್ಕೆ ಹಿಂತಿರುಗಿಸಿದ್ದಾರೆ.

ರೈತರೊಂದಿಗೆ ಕೇಂದ್ರ ಸರ್ಕಾರ ದೆಹಲಿ ವಿಜ್ಞಾನ ಭವನದಲ್ಲಿ ಮಾತುಕತೆ ನಡೆಸುತ್ತಿರುವುದರ ನಡುವೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಪತ್ರ ಬರೆದಿರುವ ಬಾದಲ್, ಪದ್ಮಭೂಷಣ ಪ್ರಶಸ್ತಿಯನ್ನು ಹಿಂತಿರುಗಿಸುತ್ತಿರುವುದಾಗಿ ಹೇಳಿದ್ದಾರೆ.

ರೈತರ ಬೇಡಿಕೆಗಳನ್ನು ಪರಿಗಣಿಸದಿರುವ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿರುವ ಪ್ರಕಾಶ್ ಸಿಂಗ್ ಬಾದಲ್, 2015ರಲ್ಲಿ ತಮಗೆ ನೀಡಲಾಗಿದ್ದ ದೇಶದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿ ಪದ್ಮ ವಿಭೂಷಣವನ್ನು ಹಿಂತಿರುಗಿಸಿದ್ದಾರೆ.

ರೈತರು ತಮ್ಮ ಮೂಲಭೂತ ಹಕ್ಕನ್ನು ಉಳಿಸಿಕೊಳ್ಳಲು ತೀವ್ರ ಚಳಿಯ ಮಧ್ಯೆಯೂ ಕಹಿ ಹೋರಾಟ ನಡೆಸುತ್ತಿದ್ದಾರೆ. ಆದರೆ ಹೊಸ ಮೂರು ಕೃಷಿ ಕಾನೂನುಗಳ ವಿರುದ್ಧ ರೈತರು ನಡೆಸುತ್ತಿರುವ ಶಾಂತಿಯುತ ಪ್ರತಿಭಟನೆಯನ್ನು ಸರ್ಕಾರ ನೋಡುತ್ತಿರುವ ರೀತಿಯಿಂದ ತಮಗೆ ದಿಗ್ಭ್ರಮೆಯಾಗಿದೆ ಎಂದು ಬಾದಲ್ ಹೇಳಿದ್ದಾರೆ.

SCROLL FOR NEXT