ದೇಶ

ಪ್ರತಿಭಟನೆ ವೇಳೆ ರೈತರ ಸಾವು: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಪಂಜಾಬ್ ಸಿಎಂ

Srinivasamurthy VN

ನವದೆಹಲಿ: ಕೇಂದ್ರ ಸರ್ಕಾರದ ವಿವಾದಿತ ಕೃಷಿ ಕಾನೂನು ವಿರುದ್ಧ ಕಳೆದ 8 ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ವೇಳೆ ಅಕಾಲಿಕ ನಿಧನರಾಗಿದ್ದ ರೈತರಿಗೆ ಪಂಜಾಬ್ ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.

ಮೃತ ರೈತರಾದ ಪಂಜಾಬ್ ನ ಮಾನ್ಸಾದ ಬಚೋವಾನಾ ಗ್ರಾಮದ ಗುರ್ಜಂತ್ ಸಿಂಗ್ ದೆಹಲಿಯಲ್ಲಿ ಸಾವನ್ನಪ್ಪಿದ್ದರೆ, ಮೊಗಾ ಜಿಲ್ಲೆಯ ಭಿಂದರ್ ಖುರ್ದ್ ಗ್ರಾಮದ ಗುರ್ಬಚನ್ ಸಿಂಗ್ (80 ವರ್ಷ) ಬುಧವಾರ ಮೊಗಾದಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಹೃದಯಾಘಾತದಿಂದ  ಮೃತಪಟ್ಟಿದ್ದರು. ರೈತರ ಸಾವಿಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಅಮರೀಂದರ್ ಸಿಂಗ್ ಅವರು ಮೃತರ ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ. 

ಇದೇ ವೇಳೆ ರೈತರ ಪ್ರತಿಭಟನೆ ಕುರಿತು ಮಾತನಾಡಿದ ಅಮರೀಂದರ್ ಸಿಂಗ್, ರೈತರು ಮತ್ತು ಕೇಂದ್ರ ಸರ್ಕಾರದ ನಡುವೆ ಚರ್ಚೆ ನಡೆಯುತ್ತಿದೆ,  ಈ ಬಗ್ಗೆ ನಾನು ಪರಿಹರಿಸಲು ಏನೂ ಇಲ್ಲ. ಗೃಹ ಸಚಿವರೊಂದಿಗಿನ ನನ್ನ ಭೇಟಿಯಲ್ಲಿ ನಾನು ನನ್ನ ವಿರೋಧವನ್ನು ಪುನರುಚ್ಚರಿಸಿದ್ದೇನೆ.   ಇದು ನನ್ನ ರಾಜ್ಯದ ಆರ್ಥಿಕತೆ ಮತ್ತು ರಾಷ್ಟ್ರದ ಸುರಕ್ಷತೆಯ ಮೇಲೆ ಪರಿಣಾಮ ಬೀರುವುದರಿಂದ ಸಮಸ್ಯೆಯನ್ನು ಪರಿಹರಿಸುವಂತೆ ವಿನಂತಿಸಿದ್ದೇನೆ ಎಂದು ಹೇಳಿದರು.

SCROLL FOR NEXT