ದೇವೇಂದ್ರ ಫಡ್ನವೀಸ್ 
ದೇಶ

ಮಹಾ ವಿಕಾಸ ಅಘಾಡಿಯ ಒಗ್ಗಟ್ಟಿನ ಸಾಮರ್ಥ್ಯ ನಿರ್ಣಯಿಸುವಲ್ಲಿ ಬಿಜೆಪಿ ವಿಫಲ: ಫಡ್ನವಿಸ್

ಮಹಾರಾಷ್ಟ್ರ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ತೀವ್ರ ಹಿನ್ನಡೆ ಅನುಭವಿಸಿದ್ದು, ಶಿವಸೇನಾ ನೇತೃತ್ವದ ಮಹಾ ವಿಕಾಸ ಅಘಾಡಿ(ಎಂವಿಎ)ಯ ಒಗ್ಗಟ್ಟಿನ ಸಾಮರ್ಥ್ಯ ನಿರ್ಣಯಿಸುವಲ್ಲಿ ಪಕ್ಷ ವಿಫಲವಾಗಿದೆ.

ಮುಂಬೈ: ಮಹಾರಾಷ್ಟ್ರ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ತೀವ್ರ ಹಿನ್ನಡೆ ಅನುಭವಿಸಿದ್ದು, ಶಿವಸೇನಾ ನೇತೃತ್ವದ ಮಹಾ ವಿಕಾಸ ಅಘಾಡಿ(ಎಂವಿಎ)ಯ ಒಗ್ಗಟ್ಟಿನ ಸಾಮರ್ಥ್ಯ ನಿರ್ಣಯಿಸುವಲ್ಲಿ ಪಕ್ಷ ವಿಫಲವಾಗಿದೆ ಎಂದು ಮಹಾರಾಷ್ಟ್ರ ಪ್ರತಿಪಕ್ಷ ನಾಯಕ ದೇವೇಂದ್ರ ಫಡ್ನವಿಸ್ ಅವರು ಶುಕ್ರವಾರ ಹೇಳಿದ್ದಾರೆ.

ಎಂವಿಎ ಅಭ್ಯರ್ಥಿಗಳು ಈವರೆಗೆ ಐದು ಕ್ಷೇತ್ರಗಳಲ್ಲಿ ಮೂರು ಸ್ಥಾನಗಳನ್ನು ಗೆದ್ದಿದ್ದಾರೆ - ಮೂರು ಪದವೀಧರರು ಮತ್ತು ಎರಡು ಶಿಕ್ಷಕ ಕ್ಷೇತ್ರಗಳಿಗೆ ಡಿಸೆಂಬರ್ 1 ರಂದು ಚುನಾವಣೆ ನಡೆದಿತ್ತು.

ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಫಡ್ನವಿಸ್ ಅವರು, ಪಕ್ಷ ಚುನಾವಣೆ ಫಲಿತಾಂಶದ ಬಗ್ಗೆ ಅವಲೋಕನ ನಡೆಸುತ್ತೆ ಮತ್ತು ಮುಂದಿನ ಚುನಾವಣೆಗೆ ಉತ್ತಮ ರೀತಿಯಲ್ಲಿ ತಯಾರಿ ಮಾಡುತ್ತದೆ ಎಂದಿದ್ದಾರೆ.

"ಈ ಚುನಾವಣೆಯಲ್ಲಿ ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್ ಒಟ್ಟು ಸಾಮರ್ಥ್ಯವನ್ನು ನಿರ್ಣಯಿಸಲು ನಮಗೆ ಸಾಧ್ಯವಾಗಲಿಲ್ಲ. ಅವರು ಎಷ್ಟು ದೊಡ್ಡ ಹೋರಾಟವನ್ನು ಒಟ್ಟಾಗಿ ನಡೆಸಬಹುದು ಎಂಬುದು ಈಗ ನಮಗೆ ಅರ್ಥವಾಗಿದೆ. ಮುಂದಿನ ಚುನಾವಣೆಗೆ ನಾವು ಉತ್ತಮವಾಗಿ ತಯಾರಿ ನಡೆಸುತ್ತೇವೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

SCROLL FOR NEXT