ದೇಶ

ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ:ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಟಿ ಆರ್ ಎಸ್ 

Nagaraja AB

ಹೈದರಾಬಾದ್: ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೋರೇಶನ್ ಚುನಾವಣೆಯಲ್ಲಿ  ಆಡಳಿತಾರೂಢ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್ ಎಸ್ ) ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.ಪ್ರತಿಪಕ್ಷವಾದ ಭಾರತೀಯ ಜನತಾ ಪಾರ್ಟಿ 48 ವಾರ್ಡ್ ಗಳನ್ನು ಗೆಲ್ಲುವುದರ ಮೂಲಕ ಮಹತ್ಸಾಧನೆ ಮಾಡಿದೆ.

ಇಂದು ನಡೆದ ಮತ ಎಣಿಕೆಯ ಫಲಿತಾಂಶದಲ್ಲಿ ಆಡಳಿತಾರೂಢ ತೆಲಂಗಾಣ ರಾಷ್ಟ್ರ ಸಮಿತಿ ( ಟಿಆರ್ ಎಸ್ ) ನಿರಾಸೆಗೊಂಡಿದ್ದು, 150 ವಾರ್ಡ್ ಗಳ ಪೈಕಿ ಕೇವಲ 56 ವಾರ್ಡ್ ಗಳಲ್ಲಿ ಜಯ ಸಾಧಿಸಿದೆ. ಅಸುದುದ್ದೀನ್ ಒವೈಸಿ ನೇತೃತ್ವದ ಎಐಎಂಐಎಂ 44 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. 

ಆಡಳಿತಾರೂಢ ಟಿಆರ್ ಎಸ್, ಬಿಜೆಪಿ ಮತ್ತು ಅಸಾದುದ್ದೀನ್ ಒವೈಸಿ ನೇತೃತ್ವದ ಅಖಿಲ ಭಾರತ ಮಜ್ಲಿಸ್ -ಎ- ಇತೇಹುದುಲ್ ಮುಸ್ಲೀಮೀನ್ ನಡುವೆ ತೀವ್ರ ಪೈಪೋಟಿ ಹೊಂದಿದ್ದ ನಗರಪಾಲಿಕೆ ಚುನಾವಣೆಯಲ್ಲಿ ಶೇ.46.55 ರಷ್ಟು ಮತದಾರರು ಮತ ಚಲಾಯಿಸಿದ್ದಾರೆ.

SCROLL FOR NEXT