ದೇಶ

ವಿಶ್ವವು ಭಾರತವನ್ನು ವಿಶ್ವಾಸಾರ್ಹ, ಭರವಸೆಯ ಪಾಲುದಾರನಾಗಿ ನೋಡುತ್ತದೆ: ಪ್ರಧಾನಿ ಮೋದಿ

Nagaraja AB

ನವದೆಹಲಿ: ಕೋವಿಡ್-19 ಬಿಕ್ಕಟ್ಟಿನ ಸಂದರ್ಭದಲ್ಲಿ ದೇಶದಲ್ಲಿ ದಾಖಲೆ ಪ್ರಮಾಣದಲ್ಲಿ ಹೂಡಿಕೆಯಾಗಿದ್ದು, ವಿಶ್ವವು ಭಾರತವನ್ನು ವಿಶ್ವಾಸಾರ್ಹ, ಭರವಸೆಯ ಪಾಲುದಾರನಾಗಿ ನೋಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಐಐಟಿ 2020 ಜಾಗೃತಿ ಶೃಂಗಸಭೆಯನ್ನುದ್ದೇಶಿಸಿ ಮಾತನಾಡಿದ ಮೋದಿ, ಪ್ರಗತಿ, ದಕ್ಷತೆ ಹಾಗೂ ಪಾರದರ್ಶಕತೆಯ ತ್ವತ್ವಗಳಿಗೆ ತಮ್ಮ ಸರ್ಕಾರ ಬದ್ಧವಾಗಿದೆ ಎಂದರು.

ಪ್ರಗತಿಯಿಂದ ಯಾವುದೇ ಕ್ಷೇತ್ರ ಹಿಂದೆ ಬಿದ್ದಿಲ್ಲ. ಕೃಷಿ, ಪರಮಾಣು ಶಕ್ತಿ, ಇಂಧನ, ರಕ್ಷಣೆ, ಶಿಕ್ಷಣ, ಆರೋಗ್ಯ, ಮೂಲಸೌಕರ್ಯ, ಹಣಕಾಸು, ಬ್ಯಾಂಕಿಂಗ್, ತೆರಿಗೆ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿಯೂ ಪ್ರಗತಿ ಕಾಣುತ್ತಿರುವುದಾಗಿ ಹೇಳಿದರು. 

ಕಾರ್ಮಿಕ ವಲಯದಲ್ಲಿ ಗಮನಾರ್ಹ ರೀತಿಯಲ್ಲಿ ಸುಧಾರಣೆಯಾಗಿದೆ. 44 ಕೇಂದ್ರ ಕಾರ್ಮಿಕ ಕಾನೂನುಗಳನ್ನು ನಾಲ್ಕು ಸಂಕೇತಗಳಲ್ಲಿ ಒಟ್ಟುಗೂಡಿಸಲಾಗಿದೆ. ನಮ್ಮ ಕಾರ್ಪೋರೇಟ್ ತೆರಿಗೆ ವಿಶ್ವದಲ್ಲಿಯೇ ಅತ್ಯಂತ ಕಡಿಮೆಯಾಗಿದೆ ಎಂದರು.

ಕೋವಿಡ್-19 ಸಂಕಷ್ಟದ ಸಂದರ್ಭದಲ್ಲಿ ದೇಶದಲ್ಲಿ ದಾಖಲೆ ಪ್ರಮಾಣದ ಹೂಡಿಕೆಯಾಗಿದೆ. ಇದರಲ್ಲಿ ತಂತ್ರಜ್ಞಾನ ಕ್ಷೇತ್ರದಿಂದಲೇ ಅಪಾರ ಪ್ರಮಾಣದ ಹೂಡಿಕೆಯಾಗಿದೆ ಎಂದು ನರೇಂದ್ರ ಮೋದಿ ತಿಳಿಸಿದರು.

SCROLL FOR NEXT