ದೇಶ

ನೂತನ ಸಂಸತ್ ಭವನ ಕಟ್ಟಡಕ್ಕೆ ಡಿಸೆಂಬರ್ 10 ರಂದು ಪ್ರಧಾನಿ ಮೋದಿ ಭೂಮಿ ಪೂಜೆ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ

Srinivasamurthy VN

ನವದೆಹಲಿ: ನೂತನ ಸಂಸತ್ ಭವನ ಕಟ್ಟಡ ನಿರ್ಮಾಣಕ್ಕಾಗಿ ಇದೇ ಡಿಸೆಂಬರ್ 10ರಂದು ಪ್ರಧಾನಿ ನರೇಂದ್ರ ಮೋದಿ ಅವರು ಭೂಮಿ ಪೂಜೆ ಮಾಡಲಿದ್ದಾರೆ ಎಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಹೇಳಿದ್ದಾರೆ.

ದೆಹಲಿ ಗಡಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಸಂಬಂಧ ಚರ್ಚೆ ನಡೆಸಲು ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸಕ್ಕೆ ಆಗಮಿಸಿದ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಈ ವೇಳೆ ನೂತನ ಸಂಸತ್ ಕಟ್ಟಡ ನಿರ್ಮಾಣದ ಕುರಿತು  ಮಾತನಾಡಿದ ಅವರು ಇದೇ ಡಿಸೆಂಬರ್ 10ರಂದು ಪ್ರಧಾನಿ ನರೇಂದ್ರ ಮೋದಿ ಅವರು ನೂತನ ಸಂಸತ್ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಲಿದ್ದಾರೆ, ಭೂಮಿ ಪೂಜೆಯಲ್ಲಿ ಪ್ರಧಾನಿ ಮೋದಿ ಪಾಲ್ಗೊಳ್ಳಲ್ಲಿದ್ದಾರೆ ಎಂದು ಹೇಳಿದರು.

ಕಳೆದ ಸೆಪ್ಟೆಂಬರ್ ನಲ್ಲಿ ಟಾಟಾ ಪ್ರಾಜೆಕ್ಟ್ಸ್ ಲಿಮಿಟೆಡ್ ಹೊಸ ಸಂಸತ್ತು ಭವನವನ್ನು ನಿರ್ಮಿಸುವ ಬಿಡ್ಡಿಂಗ್ ಪ್ರಕ್ರಿಯೆಯನ್ನು ಗೆದ್ದುಕೊಂಡಿದ್ದು, 861.90 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿಕೊಡಲಿದೆ. 

ಈಗಿರುವ ಸಂಸತ್ತು ಬ್ರಿಟಿಷರ ಕಾಲದ್ದಾಗಿದ್ದು, ಎಡ್ವಿನ್ ಲುಟ್ಯಿನ್ಸ್ ಮತ್ತು ಹರ್ಬರ್ಟ್ ಬೇಕರ್ ಅವರು ವಿನ್ಯಾಸಗೊಳಿಸಿ ನಿರ್ಮಿಸಿದ್ದರು. ಇದನ್ನು ಕಟ್ಟಿದ್ದು 1921ರ ಫೆಬ್ರವರಿ 12ರಂದು ಶಂಕುಸ್ಥಾಪನೆ ನೆರವೇರಿಸಿ ಮುಂದಿನ ಆರು ವರ್ಷಗಳಲ್ಲಿ ಆಗಿನ ಕಾಲದಲ್ಲಿ 83 ಲಕ್ಷ ರೂಪಾಯಿ ವೆಚ್ಚದಲ್ಲಿ  ನಿರ್ಮಾಣ ಪೂರ್ಣಗೊಳಿಸಲಾಗಿತ್ತು. 

SCROLL FOR NEXT