ಬಿಜೆಪಿ 
ದೇಶ

ಉತ್ತರ ಪ್ರದೇಶ ಎಂಎಲ್ ಸಿ ಚುನಾವಣೆ: 6 ಶಿಕ್ಷಕ ಕ್ಷೇತ್ರಗಳ ಪೈಕಿ 3ರಲ್ಲಿ ಬಿಜೆಪಿ ಗೆಲುವು

ಉತ್ತರ ಪ್ರದೇಶ ವಿಧಾನ ಪರಿಷತ್ ನ ಆರು ಶಿಕ್ಷಕ ಕ್ಷೇತ್ರಗಳಿಗೆ ನಡೆದ ಚುನಾವಣೆಯ ಫಲಿತಾಂಶ ಶನಿವಾರ ಪ್ರಕಟವಾಗಿದ್ದು, ಆಡಳಿತರೂಢ ಬಿಜೆಪಿ ಮೂರು ಸ್ಥಾನಗಳಲ್ಲಿ ಭರ್ಜರಿ ಗೆಲುವು ಸಾಧಿಸಿದೆ.

ಲಖನೌ: ಉತ್ತರ ಪ್ರದೇಶ ವಿಧಾನ ಪರಿಷತ್ ನ ಆರು ಶಿಕ್ಷಕ ಕ್ಷೇತ್ರಗಳಿಗೆ ನಡೆದ ಚುನಾವಣೆಯ ಫಲಿತಾಂಶ ಶನಿವಾರ ಪ್ರಕಟವಾಗಿದ್ದು, ಆಡಳಿತರೂಢ ಬಿಜೆಪಿ ಮೂರು ಸ್ಥಾನಗಳಲ್ಲಿ ಭರ್ಜರಿ ಗೆಲುವು ಸಾಧಿಸಿದೆ.

ಆರು ಸ್ಥಾನಗಳ ಪೈಕಿ ಬಿಜೆಪಿ ಮೂರು ಸ್ಥಾನ ಪಡೆದರೆ, ಪ್ರಮುಖ ಪ್ರತಿಪಕ್ಷ ಸಮಾಜವಾದಿ ಪಕ್ಷ ಒಂದು ಸ್ಥಾನ ಹಾಗೂ ಗೋರಖ್ ಪುರ ಮತ್ತು ಆಗ್ರದಲ್ಲಿ ಪಕ್ಷೇತರರು ಗೆಲುವು ಸಾಧಿಸಿದ್ದಾರೆ.

ತಜ್ಞರ ಪ್ರಕಾರ, ಕೇಸರಿ ಪಕ್ಷ ಮೀರತ್‌ನಲ್ಲಿ ಎಂಟು ಬಾರಿ ಎಂಎಲ್ ಸಿ ಯಾಗಿ ಆಯ್ಕೆಯಾಗಿದ್ದ ಉತ್ತರ ಪ್ರದೇಶ ಮಧ್ಯಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಓಂ ಪ್ರಕಾಶ್ ಶರ್ಮಾ ಅವರ ವಿರುದ್ಧ ಗೆಲುವು ಸಾಧಿಸುವ ಮೂಲಕ 50 ವರ್ಷಗಳ ಪ್ರಾಬಲ್ಯವನ್ನು ಕೊನೆಗೊಳಿಸಿದೆ.

ಆದಾಗ್ಯೂ, ಪ್ರಧಾನಿ ನರೇಂದ್ರ ಮೋದಿ ಪ್ರತಿನಿಧಿಸುವ ಲೋಕಸಭಾ ಕ್ಷೇತ್ರ ವಾರಣಾಸಿಯಲ್ಲಿ ಬಿಜೆಪಿ ವಿಫಲವಾಗಿದೆ. ಈ ಕ್ಷೇತ್ರದಲ್ಲಿ ಬಿಜೆಪಿ ವಿರುದ್ಧ ಸಮಾಜವಾದಿ ಪಕ್ಷ ಗೆಲುವು ಸಾಧಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

US-Iran ಸಂಘರ್ಷ ತೀವ್ರ: Hormuz ಜಲಸಂಧಿ ಬಳಿ ಅಮೆರಿಕ ಭೀಕರ ವೈಮಾನಿಕ ದಾಳಿ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ..!

Bangkok pubನಲ್ಲಿ ಭೀಕರ ಅಗ್ನಿ ಅವಘಡ; 27 ಮಂದಿ ಸಜೀವ ದಹನ; 63ಕ್ಕೂ ಹೆಚ್ಚು ಮಂದಿಗೆ ಗಾಯ, ವಿದ್ಯುತ್ ದೋಷವೇ ದುರಂತಕ್ಕೆ ಕಾರಣ?

ರಾಹುಲ್ ದ್ರಾವಿಡ್ ಇಂಗ್ಲೆಂಡ್ ಟೆಸ್ಟ್ ತಂಡದ ಮುಂದಿನ ಕೋಚ್ ಆಗ್ತಾರಾ?

ನಾಳೆ ಅರ್ಧಕ್ಕೆ ಹಾರಲಿದೆ ತ್ರಿವರ್ಣ ಧ್ವಜ; ದೇಶಾದ್ಯಂತ ಶೋಕಾಚರಣೆ: ಕತಾರ್‌ನ ಮಾಜಿ ಅಮೀರ್ ನಿಧನಕ್ಕೆ PM ಮೋದಿ ಸಂತಾಪ

ಅಮೆರಿಕ ಜೊತೆ ಒಪ್ಪಂದ 'ಮುಗಿದಿದೆ': ಹೊಸ ದಾಳಿಗಳ ಬೆನ್ನಲ್ಲೇ ಇರಾನ್ ಘೋಷಣೆ