ದೇಶ

ಕೋವಿಡ್-19: ದೇಶದಲ್ಲಿಂದು 36,652 ಹೊಸ ಕೇಸ್ ಪತ್ತೆ, ಸೋಂಕಿತರ ಸಂಖ್ಯೆ 96 ಲಕ್ಷ

Manjula VN

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆಯ ಇಳಿಮುಖ ಹಾದಿ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 36,652 ಮಂದಿಗೆ ಹೊಸದಾಗಿ ಕೊರೋನ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಈವರೆಗೆ ಒಟ್ಟು ಸೋಂಕು ಪ್ರಕರಣಗಳ ಸಂಖ್ಯೆ 96 ಲಕ್ಷ ಗಡಿ ದಾಟಿದೆ. 

ದೇಶದಲ್ಲಿ ಪ್ರಸ್ತುತ ಒಟ್ಟಾರೆ ಸೋಂಕಿತರ ಸಂಖ್ಯೆ 96,08,211ಕ್ಕೆ ಏರಿಕೆಯಾಗಿದ್ದು, ಕಳೆದ 24 ಗಂಟೆಗಳಲ್ಲಿ 540 ಮಂದಿ ಸೋಂಕಿಗೆ ಸಾವನ್ನಪ್ಪಿದ್ದಾರೆ.ಇದುವರೆಗೂ ಮೃತಪಟ್ಟವರ ಸಂಖ್ಯೆ 1,39,700ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಹೊಸ ಪ್ರಕರಣಗಳಿಗೆ ಹೋಲಿಸಿದರೆ ಗುಣಮುಖರಾಗುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಒಂದು ದಿನದಲ್ಲಿ 42,533 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, ಇದುವರೆಗೂ 90,58,822 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗಳಿಗೆ ಹಿಂತಿರುಗಿದ್ದಾರೆ. 

ದೇಶದಲ್ಲಿ ಇದೀಗ 4,09,689 ಸಕ್ರಿಯ ಪ್ರಕರಣಗಳಿವೆ. ಕೊರೋನಾ ಸೋಂಕು ಹರಡುವಿಕೆಗೆ ಕಡಿವಾಣ ಹಾಕಲು ತಪಾಸಣೆಯನ್ನು ಹೆಚ್ಚಿಸಲಾಗುತ್ತಿದೆ.

ಭಾರತದಲ್ಲಿ ಒಂದೇ ದಿನ 11,57,763 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ ದೇಶದಲ್ಲಿ 14,58,85,512 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ. 

SCROLL FOR NEXT