ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ: ಪೊಲೀಸ್, ನಾಗರಿಕರಿಗೆ ಗಾಯ
ಶ್ರೀನಗರದಲ್ಲಿ ಭಾನುವಾರ ಉಗ್ರರು ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿದ್ದರಿಂದ ನಾಗರಿಕರೊಬ್ಬರು ಸೇರಿದಂತೆ ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಶ್ರೀನಗರ: ಶ್ರೀನಗರದಲ್ಲಿ ಭಾನುವಾರ ಉಗ್ರರು ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿದ್ದರಿಂದ ನಾಗರಿಕರೊಬ್ಬರು ಸೇರಿದಂತೆ ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶ್ರೀನಗರದ ಹವಾಲಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದು ಅವರು ಹೇಳಿದ್ದಾರೆ.
ಹವಾಲಾ ಚೌಕಾದಲ್ಲಿ ಪೊಲೀಸರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ ಪರಿಣಾಮ ಗಾಯಗೊಂಡಿರುವ ಪೊಲೀಸ್ ಹಾಗೂ ನಾಗರಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಭಯೋತ್ಪಾದಕರ ಪತ್ತೆಗಾಗಿ ಈ ಪ್ರದೇಶವನ್ನು ಪೊಲೀಸರು ಸುತ್ತುವರಿದಿರುವುದಾಗಿ ಅವರು ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.