ಸಚಿನ್ ಪೈಲಟ್ ಮಾಧ್ಯಮ ಮ್ಯಾನೇಜರ್, ಪತ್ರಕರ್ತನ ವಿರುದ್ಧದ ಕೇಸ್ ಮುಚ್ಚಿಹಾಕಿದ ಪೊಲೀಸರು
ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಸಚಿನ್ ಪೈಲಟ್ ಮಾಧ್ಯಮ ಮ್ಯಾನೇಜರ್ ಮತ್ತು ರಾಷ್ಟ್ರೀಯ ಸುದ್ದಿ ವಾಹಿನಿಯೊಂದರ ಪತ್ರಕರ್ತನ ವಿರುದ್ಧದ ಕೇಸ್ ನ್ನು ಪೊಲೀಸರು ಮುಚ್ಚಿ ಹಾಕಿದ್ದಾರೆ. ಅವರ ವಿರುದ್ಧ ಯಾವುದೇ ಸಾಕ್ಷ್ಯಧಾರ ಇಲ್ಲ ಎಂದು ಅಂತಿಮ ವರದಿಯನ್ನು ಸಲ್ಲಿಸಿರುವುದಾಗಿ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಜೈಪುರ: ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಸಚಿನ್ ಪೈಲಟ್ ಮಾಧ್ಯಮ ಮ್ಯಾನೇಜರ್ ಮತ್ತು ರಾಷ್ಟ್ರೀಯ ಸುದ್ದಿ ವಾಹಿನಿಯೊಂದರ ಪತ್ರಕರ್ತನ ವಿರುದ್ಧದ ಕೇಸ್ ನ್ನು ಪೊಲೀಸರು ಮುಚ್ಚಿ ಹಾಕಿದ್ದಾರೆ. ಅವರ ವಿರುದ್ಧ ಯಾವುದೇ ಸಾಕ್ಷ್ಯಧಾರ ಇಲ್ಲ ಎಂದು ಅಂತಿಮ ವರದಿಯನ್ನು ಸಲ್ಲಿಸಿರುವುದಾಗಿ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.
ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಸಚಿನ್ ಪೈಲಟ್ ನಡುವಣ ಅಧಿಕಾರಕ್ಕಾಗಿ ಭಿನ್ನಾಭಿಪ್ರಾಯ ಭುಗಿಲೆದಿದ್ದಾಗ ಆಗಸ್ಟ್ ತಿಂಗಳಲ್ಲಿ ಸುಳ್ಳು ಸುದ್ದಿ ಆರೋಪದಲ್ಲಿ ಮಾಜಿ ಮುಖ್ಯಮಂತ್ರಿಗಳ ಮಾಧ್ಯಮ ಮ್ಯಾನೇಜರ್ ಲೊಕೇಂದ್ರ ಸಿಂಗ್ ಸೇರಿದಂತೆ ಇಬ್ಬರು ಪತ್ರಕರ್ತರ ವಿರುದ್ಧ ಜೈಪುರ ಪೊಲೀಸರು ಪ್ರಕರಣ ದಾಖಲಿಸಿದ್ದರು.
ತಪಿತಸ್ಥ ಎಂಬುದಕ್ಕೆ ಯಾವುದೇ ಸಾಕ್ಷ್ಯಧಾರಗಳು ಕಂಡುಬಾರದ ಹಿನ್ನೆಲೆಯಲ್ಲಿ ಪೊಲೀಸರು ಅಂತಿಮ ವರದಿಯನ್ನು ದಾಖಲಿಸಿದ್ದಾರೆ ಎಂದು ಜೈಪುರ ಪೊಲೀಸ್ ಆಯುಕ್ತ ಆನಂದ್ ಶ್ರಿವಾಸ್ತವ ಸುದ್ದಿಗಾರರಿಗೆ ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.