ಉಗ್ರರ ಭಾರೀ ಸಂಚು ವಿಫಲ: ದೆಹಲಿ ಪೊಲೀಸರಿಂದ 5 ಉಗ್ರರ ಬಂಧನ, ಶಸ್ತ್ರಾಸ್ತ್ರಗಳು ವಶಕ್ಕೆ
ಮಹತ್ವದ ಬೆಳವಣಿಗೆಯೊಂದರಲ್ಲಿ ದೆಹಲಿ ಪೊಲೀಸರು ಸೋಮವಾರ ಐವರು ಉಗ್ರರನ್ನು ಬಂಧನಕ್ಕೊಳಪಡಿಸುವ ಮೂದಲ ಭಾರೀ ದಾಳಿ ಸಂಚೊಂದನ್ನು ವಿಪಲಗೊಳ್ಳುವಂತೆ ಮಾಡಿದ್ದಾರೆ.
ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ದೆಹಲಿ ಪೊಲೀಸರು ಸೋಮವಾರ ಐವರು ಉಗ್ರರನ್ನು ಬಂಧನಕ್ಕೊಳಪಡಿಸುವ ಮೂದಲ ಭಾರೀ ದಾಳಿ ಸಂಚೊಂದನ್ನು ವಿಪಲಗೊಳ್ಳುವಂತೆ ಮಾಡಿದ್ದಾರೆ.
ರಾಷ್ಟ್ರ ರಾಜಧಾನಿ ದೆಹಲಿಯ ಶಕರ್ ಪುರ್ ಎಂಬ ಪ್ರದೇಶದಲ್ಲಿ ಐವರು ಉಗ್ರರನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ತಿಳಿದುಬಂದಿದೆ.
ಭಾರೀ ಗುಂಡಿನ ಚಕಮಕಿ ಬಳಿಕ ಉಗ್ರರನ್ನು ಬಂಧನಕ್ಕೊಳಪಡಿಸಲಾಗಿದ್ದು, ಬಂಧಿತ ಉಗ್ರರು ಯಾವ ಸಂಘಟನೆಗೆ ಸೇರಿದವರಾಗಿದ್ದಾರೆಂಬುದು ಇನ್ನೂ ತಿಳಿದುಬಂದಿಲ್ಲ.
ಬಂಧಿತ ಐವರಲ್ಲಿ ಮೂವರು ಉಗ್ರರು ಜಮ್ಮು ಮತ್ತು ಕಾಶ್ಮೀರ ಮೂಲದವರಾಗಿದ್ದು, ಇಬ್ಬರು ಪಂಜಾಬ್ ರಾಜ್ಯಕ್ಕೆ ಸೇರಿದವರಾಗಿದ್ದಾರೆಂದು ಹೇಳಲಾಗುತ್ತಿದೆ.