ಬಿಜೆಪಿ ಸೇರಿದ ವಿಜಯಶಾಂತಿ 
ದೇಶ

ಮರಳಿ ಬಿಜೆಪಿ ಮನೆ ಸೇರಿದ ನಟಿ ವಿಜಯಶಾಂತಿ

ತೆಲುಗು ಚಿತ್ರರಂಗದ ನಟಿ - ಲೇಡಿ ಅಮಿತಾಭ್ ಎಂದೇ ಗುರುತಿಸಿಕೊಂಡ ರಾಜಕಾರಣಿ ವಿಜಯಶಾಂತಿ ಅವರು ಸೋಮವಾರ ದೆಹಲಿಯಲ್ಲಿ ಅಧಿಕೃತವಾಗಿ ಬಿಜೆಪಿಗೆ ಮರು ಸೇರ್ಪಡೆಗೊಂಡಿದ್ದಾರೆ.

ನವದೆಹಲಿ: ತೆಲುಗು ಚಿತ್ರರಂಗದ ನಟಿ - ಲೇಡಿ ಅಮಿತಾಭ್ ಎಂದೇ ಗುರುತಿಸಿಕೊಂಡ ರಾಜಕಾರಣಿ ವಿಜಯಶಾಂತಿ ಅವರು ಸೋಮವಾರ ದೆಹಲಿಯಲ್ಲಿ ಅಧಿಕೃತವಾಗಿ ಬಿಜೆಪಿಗೆ ಮರು ಸೇರ್ಪಡೆಗೊಂಡಿದ್ದಾರೆ.

ತೆಲಂಗಾಣ ಬಿಜೆಪಿ ಅಧ್ಯಕ್ಷ ಸಂಜಯ್ ಕುಮಾರ್ ಮತ್ತು ಇತರೆ ನಾಯಕರ ಸಮ್ಮುಖದಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಿತು. ನಿನ್ನೆಯಷ್ಟೇ ಅವರು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು.

ವಿಜಯಶಾಂತಿ ದೆಹಲಿಯಲ್ಲಿ ಭಾನುವಾರ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಕೂಡ ಭೇಟಿ ಮಾಡಿ ಮಾತುಕತೆ ಮಾಡಿದ್ದರು ಎಂದು ಪಕ್ಷದ ಮೂಲಗಳು ತಿಳಿಸಿವೆ.

ದಕ್ಷಿಣ ಭಾರತದಲ್ಲಿ ಲೇಡಿ ಅಮಿತಾಭ್ ಎಂದೇ ಪ್ರಸಿದ್ಧರಾದ ವಿಜಯಶಾಂತಿ, 1997ರಲ್ಲಿ ಬಿಜೆಪಿ ಸೇರಿ ನಂತರ ಬಿಜೆಪಿ ಮಹಿಳಾ ಮೋರ್ಚಾದ ಕಾರ್ಯದರ್ಶಿಯಾಗಿದ್ದರು.

ಟಿಆರ್ ಎಸ್ ನಿಂದ 2009 ರಿಂದ 2014ರ ತನಕ ಮೇದಕ್ ಸಂಸದೆಯಾಗಿದ್ದ ವಿಜಯಶಾಂತಿ ಅವರು ಮೇದಕ್ ನಿಂದ ವಿಧಾನಸಭೆಗೆ ಸ್ಪರ್ಧಿಸಿ, ಸೋಲು ಕಂಡಿದ್ದರು. ನಂತರ 2014ರ ಫೆಬ್ರವರಿ ಟಿಆರ್ ಎಸ್ ತೊರೆದು ಕಾಂರ್ಗೆಸ್ ಸೇರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

'ತಂದಿಟ್ಟ ಗಿಡ ಮನೆಗೇ ಹಾನಿ ಮಾಡಿದ್ರೆ..'; 'ನೋ ಕ್ಲಾಸ್', BiggBoss ಇತಿಹಾಸದ ಅತಿದೊಡ್ಡ ನಿರ್ಧಾರದ ಸುಳಿವು ನೀಡಿದ ಕಿಚ್ಚಾ ಸುದೀಪ್

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌‌ವೇಯಲ್ಲಿ ಅಪಘಾತಕ್ಕೆ ಬಿಗ್ ಟ್ವಿಸ್ಟ್: ಸ್ನೇಹಿತನಿಂದಲೇ ಭೂಮಿಕಾ ಕೊಲೆ?

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!