ಸಾಂದರ್ಭಿಕ ಚಿತ್ರ 
ದೇಶ

ದೇಶದ 30 ಕೋಟಿ ಜನರಿಗೆ ಮೊದಲಿಗೆ ಕೋವಿಡ್ ಲಸಿಕೆ: ಕೇಂದ್ರ ಸರ್ಕಾರ

ಆರೋಗ್ಯ ಸಿಬ್ಬಂದಿ, ಮುಂಚೂಣಿ ಕಾರ್ಯಕರ್ತರು ಸೇರಿದಂತೆ ದೇಶದ ಸುಮಾರು 30 ಕೋಟಿ ಜನರು ಮೊದಲಿಗೆ ಲಸಿಕೆ ಪಡೆಯಲಿದ್ದಾರೆ ಎಂದು ಕೊರೋನಾ ವೈರಸ್ ಲಸಿಕೆಯ ಕಾರ್ಯತಂತ್ರದ ಬಗ್ಗೆ ಮೊದಲ ಬಾರಿಗೆ ಅಧಿಕೃತ ಮಾಹಿತಿಯನ್ನು ಕೇಂದ್ರ ಸರ್ಕಾರ ಇಂದು ಹಂಚಿಕೊಂಡಿದೆ.

ನವದೆಹಲಿ: ಆರೋಗ್ಯ ಸಿಬ್ಬಂದಿ, ಮುಂಚೂಣಿ ಕಾರ್ಯಕರ್ತರು ಸೇರಿದಂತೆ ದೇಶದ ಸುಮಾರು 30 ಕೋಟಿ ಜನರು ಮೊದಲಿಗೆ ಲಸಿಕೆ ಪಡೆಯಲಿದ್ದಾರೆ ಎಂದು ಕೊರೋನಾ ವೈರಸ್ ಲಸಿಕೆಯ ಕಾರ್ಯತಂತ್ರದ ಬಗ್ಗೆ ಮೊದಲ ಬಾರಿಗೆ ಅಧಿಕೃತ ಮಾಹಿತಿಯನ್ನು ಕೇಂದ್ರ ಸರ್ಕಾರ ಇಂದು ಹಂಚಿಕೊಂಡಿದೆ.

ಅಗತ್ಯವಿರುವ  ಪ್ರತಿಯೊಬ್ಬ ಜನರಿಗೂ  ಲಸಿಕೆ ಹಾಕುವಂತೆ  ಕೋವಿಡ್ -19 ಲಸಿಕೆ ಆಡಳಿತದ ರಾಷ್ಟ್ರೀಯ ತಜ್ಞರ ಗುಂಪು ಶಿಫಾರಸು ಮಾಡಿದೆ ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದರು. ಲಸಿಕೆ ಅಗತ್ಯವಿರುವ ಗುಂಪುಗಳನ್ನು ಆದ್ಯತೆ ಮೇರೆಗೆ ವಿಂಗಡಿಸಲಾಗುವುದು ಎಂದರು. 

ಸರ್ಕಾರಿ ಮತ್ತು ಖಾಸಗಿ ವಲಯಗಳಲ್ಲಿ ಕೆಲಸ ಮಾಡುತ್ತಿರುವ 1 ಕೋಟಿ ಆರೋಗ್ಯ ಕಾರ್ಯಕರ್ತರಿದ್ದರೆ, ಕೇಂದ್ರ ಹಾಗೂ ರಾಜ್ಯ ಪೊಲೀಸ್ ಇಲಾಖೆ, ಶಸಾಸ್ತ್ರ ಪಡೆ, ಹೋಮ್ ಗಾರ್ಡ್, ವಿಪತ್ತು ನಿರ್ವಹಣಾ ಸ್ವಯಂ ಸೇವಕರು, ಪೌರ ಕಾರ್ಮಿಕರು ಸೇರಿದಂತೆ ಸುಮಾರು 2 ಕೋಟಿ ಮುಂಚೂಣಿ ಕಾರ್ಯಕರ್ತರಿದ್ದಾರೆ. ಮೂರನೇ ಗುಂಪಿನಲ್ಲಿ 50 ವರ್ಷಕ್ಕೂ ಮೇಲ್ಪಟ್ಟ  27 ಕೋಟಿ ಜನರಿದ್ದಾರೆ ಎಂದು ಮಾಹಿತಿ ನೀಡಿದರು.

ಆರೋಗ್ಯ ಕೇಂದ್ರಗಳಲ್ಲಿ ಕೆಲಸ ಮಾಡುವವರ ಮಾಹಿತಿ ಸಂಗ್ರಹಿಸುವ ಪ್ರಕ್ರಿಯೆ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಆರಂಭವಾಗಿದ್ದು,ಕೋ- ವಿನ್ ಸಾಪ್ಟ್ ವೇರ್ ನಲ್ಲಿ ಅಪ್ ಲೋಡ್ ಮಾಡಲಾಗುತ್ತಿದೆ. ಲಸಿಕೆ ಸಂಗ್ರಹಕ್ಕಾಗಿ ದೇಶಾದ್ಯಂತ 28, 947 ಕೋಲ್ಡ್ ಚೈನ್ ಪಾಯಿಂಟ್ ಗಳನ್ನು ಸ್ಥಾಪಿಸಲಾಗಿದೆ. ಮೊದಲಿಗೆ ಮೂರು ಕೋಟಿ ಆರೋಗ್ಯ ಕಾರ್ಯಕರ್ತರು ಮತ್ತು ಮುಂಚೂಣಿ ಕಾರ್ಯಕರ್ತರಿಗೆ ಅಗತ್ಯವಿರುವ ಹೆಚ್ಚುವರಿ ಕೋವಿಡ್-19 ಲಸಿಕೆ ಸಂಗ್ರಹಕ್ಕೆ ಪ್ರಸ್ತುತವಿರುವ ಕೋಲ್ಡ್ ಚೈನ್ ವ್ಯವಸ್ಥೆಯು ಸಮರ್ಥವಾಗಿದೆ ಎಂದು ಮಾಹಿತಿ ನೀಡಲಾಗಿದೆ.

ವಾಕ್ -ಇನ್ ಕೂಲರ್ಸ್, ವಾಕ್ -ಇನ್ ಫ್ರೀಜರ್ಸ್, ಡೀಪ್ ಫ್ರೀಜರ್ಸ್ ಮತ್ತಿತರ ಕೋಲ್ಡ್ ಚೈನ್ ಸಂಗ್ರಹಕ್ಕಾಗಿ ಹೆಚ್ಚುವರಿ ಅಗತ್ಯತೆ ಬಗ್ಗೆ ಆರೋಗ್ಯ ಸಚಿವಾಲಯ ಸರ್ಕಾರಗಳೊಂದಿಗೆ ಸಮಾಲೋಚನೆ ನಡೆಸುತ್ತಿದೆ. ಮಾರ್ಗಸೂಚಿ ಅನುಷ್ಠಾನ ಪ್ರಕ್ರಿಯೆ ಅಂತಿಮಗೊಂಡಿದೆ. ಸಮಗ್ರ ಅನುಷ್ಠಾನ ಯೋಜನೆ ಸಂಬಂಧ ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರದೊಂದಿಗೆ ಚರ್ಚಿಸಿ ನಿರ್ಧರಿಸಲಾಗುವುದು ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಹನಿಟ್ರ್ಯಾಪ್ ಭೀತಿಯಲ್ಲಿದ್ದ ಸಿದ್ದರಾಮಯ್ಯಗೆ ಬಿಗ್ ರಿಲೀಫ್: ಮಾಧ್ಯಮಗಳಿಗೆ ವಿಡಿಯೋ ಪ್ರಸಾರ ಮಾಡದಂತೆ ನಿರ್ಬಂಧ ವಿಧಿಸಿದ ಕೋರ್ಟ್

ಅವಧಿಗೂ ಮುನ್ನವೇ ಕೇಂದ್ರ ಸಚಿವ ಮತ್ತು ರಾಜ್ಯಸಭಾ ಸದಸ್ಯ ಸ್ಥಾನಕ್ಕೆ BJP ನಾಯಕ ಮುರುಗನ್ ರಾಜಿನಾಮೆ: PM ಮೋದಿಗೆ 5 ಪುಟಗಳ ಪತ್ರ!

ಮಾಜಿ ಸಂಸದ ಪ್ರತಾಪ್ ಸಿಂಹಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು ಅರ್ಜಿ ವಜಾ

ದಕ್ಷಿಣ ಕನ್ನಡ ಜಿಲ್ಲೆಗೆ 'ಮಂಗಳೂರು ಜಿಲ್ಲೆ' ಎಂದು ಮರುನಾಮಕರಣದ ಪ್ರಸ್ತಾವನೆ: ಸಾರ್ವಜನಿಕರಿಂದ ಆಕ್ಷೇಪಣೆಗೆ ಆಹ್ವಾನ

'ಇಂಡಿಯಾ' ಮೈತ್ರಿಕೂಟದ ಒಗ್ಗಟ್ಟು ಮುರಿಯುತ್ತಿದೆಯೇ? ಜ್ಞಾನೇಶ್ ಕುಮಾರ್ ವಿರುದ್ಧ ಸುಪ್ರೀಂಗೆ ಅರ್ಜಿ, 4 ಪ್ರಮುಖ ಪಕ್ಷಗಳು "ದೂರ ದೂರ"