ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ದೇಶದಲ್ಲಿ ಕೊರೋನಾ ವೈರಸ್ ಅಬ್ಬರ ಇಳಿಕೆ: ಭಾರತದಲ್ಲಿಂದು 30 ಸಾವಿರಕ್ಕಿಂತ ಕಡಿಮೆ ಕೇಸ್ ಪತ್ತೆ

ದೇಶದಲ್ಲಿ ಮಹಾಮಾರಿ ಕೊರೋನಾ ವೈರಸ್ ಅಬ್ಬರ ಇಳಿಯುತ್ತಿದ್ದು, ಭಾರತದಲ್ಲಿ ಮಂಗಳವಾರ 30 ಸಾವಿರಕ್ಕಿಂತ ಕಡಿಮೆ ಹೊಸ ಪ್ರಕರಣಗಳು ಪತ್ತೆಯಾಗಿವೆ.

ಸಂಗ್ರಹ ಚಿತ್ರ
Manjula VN
Updated On : 8 Dec 2020, 12:55 pm

ನವದೆಹಲಿ: ದೇಶದಲ್ಲಿ ಮಹಾಮಾರಿ ಕೊರೋನಾ ವೈರಸ್ ಅಬ್ಬರ ಇಳಿಯುತ್ತಿದ್ದು, ಭಾರತದಲ್ಲಿ ಮಂಗಳವಾರ 30 ಸಾವಿರಕ್ಕಿಂತ ಕಡಿಮೆ ಹೊಸ ಪ್ರಕರಣಗಳು ಪತ್ತೆಯಾಗಿವೆ. 

ಕಳೆದ 24 ಗಂಟೆಗಳಲ್ಲಿ 26,567 ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 97,03,770ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ಇನ್ನು ಒಂದೇ 385 ಮಂದಿ ಸೋಂಕಿಗೆ ಸಾವನ್ನಪ್ಪಿದ್ದಾರೆ. ಇದುವರೆಗೂ ಮೃತಪಟ್ಟವರ ಸಂಖ್ಯೆ 1,40,958.ಕ್ಕೆ ಏರಿಕೆಯಾಗಿದೆ ಎಂದು ಸಚಿವಾಲಯ ತಿಳಿಸಿದೆ. 

Advertisement

Advertisement

ಹೊಸ ಪ್ರಕರಣಗಳಿಗೆ ಹೋಲಿಸಿದರೆ ಗುಣಮುಖರಾಗುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಒಂದು ದಿನದಲ್ಲಿ 39,045 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, ಇದುವರೆಗೂ 91,78,946 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗಳಿಗೆ ಹಿಂತಿರುಗಿದ್ದಾರೆ. 

ದೇಶದಲ್ಲಿ ಇದೀಗ 3,83,866.ಸಕ್ರಿಯ ಪ್ರಕರಣಗಳಿವೆ. ಕೊರೋನಾ ಸೋಂಕು ಹರಡುವಿಕೆಗೆ ಕಡಿವಾಣ ಹಾಕಲು ತಪಾಸಣೆಯನ್ನು ಹೆಚ್ಚಿಸಲಾಗುತ್ತಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments