ಕೃಷಿ ಕಾನೂನುಗಳ ಬಗ್ಗೆ ಅರಿವು ಮೂಡಿಸಲು ಬಿಜೆಪಿ ಬಿಗ್ ಪ್ಲಾನ್!
ರೈತರ ಹೋರಾಟ ತೀವ್ರಗೊಳ್ಳುತ್ತಿರುವ ನಡುವೆಯೂ ಕೇಂದ್ರ ಸರ್ಕಾರದ ಕೃಷಿ ಕಾನೂನುಗಳ ಬಗ್ಗೆ ಅರಿವು ಮೂಡಿಸಲು ಬಿಜೆಪಿ ದೊಡ್ಡ ಯೋಜನೆ ಹಾಕಿಕೊಂಡಿದೆ. ರೈತರ ಪ್ರತಿಭಟನೆಗೆ ಪ್ರತಿಯಾಗಿ ಪ್ರಚಾರವನ್ನು ಬಿಜೆಪಿ ಆರಂಭಿಸುತ್ತಿದೆ.
ನವದೆಹಲಿ: ರೈತರ ಹೋರಾಟ ತೀವ್ರಗೊಳ್ಳುತ್ತಿರುವ ನಡುವೆಯೂ ಕೇಂದ್ರ ಸರ್ಕಾರದ ಕೃಷಿ ಕಾನೂನುಗಳ ಬಗ್ಗೆ ಅರಿವು ಮೂಡಿಸಲು ಬಿಜೆಪಿ ದೊಡ್ಡ ಯೋಜನೆ ಹಾಕಿಕೊಂಡಿದೆ. ರೈತರ ಪ್ರತಿಭಟನೆಗೆ ಪ್ರತಿಯಾಗಿ ಪ್ರಚಾರವನ್ನು ಬಿಜೆಪಿ ಆರಂಭಿಸುತ್ತಿದೆ.
ಕೃಷಿ ಕಾನೂನುಗಳ ಬಗ್ಗೆ ರೈತರಿಗೆ ಮನನ ಮಾಡಿಕೊಳ್ಳಲು ಸೂಕ್ತ ಯೋಜನೆ ಹಾಕಿಕೊಳ್ಳಲಾಗಿದೆ. ಕಿಸಾನ್ ಕಾನೂನುಗಳ ಬಗ್ಗೆ ಚರ್ಚಿಸಲು ದೇಶದ 100 ಕಡೆಗಳಲ್ಲಿ ಕಿಸಾನ್ ಸಮ್ಮೇಳನ ಮತ್ತು ಚೌಪಾಲ್ ನಡೆಸಲಾಗುತ್ತಿದೆ.
ಕೇಂದ್ರ ಸರ್ಕಾರದ ನೂತನ ಕಾನೂನುಗಳ ಬಗ್ಗೆ ದೇಶದ ಎಲ್ಲಾ ಜಿಲ್ಲೆಗಳಲ್ಲಿ ಪ್ರೆಸ್ ಕಾನ್ಫರೆನ್ಸ್, ವಿಚಾರ ಗೋಷ್ಠಿಗಳು ಮತ್ತು ಜನ ಸಂಪರ್ಕ ನಡೆಸಲು ಬಿಜೆಪಿ ನಿರ್ಧರಿಸಿದೆ.
ಮುಂದಿನ ದಿನಗಳಲ್ಲಿ 700 ಪ್ರೆಸ್ ಕಾನ್ಫರೆನ್ಸ್, ನೂರಾರು ವಿಚಾರ ಗೋಷ್ಠಿಗಲು ಮತ್ತು ಜನ ಸಂಪರ್ಕ ಸಭೆಗಳನ್ನು ಆಯೋಜಿಸಲಾಗುತ್ತಿದೆ. ಈ ಸಂಬಂಧ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿಡಿಯೋ ಕಾನ್ಫೆರೆನ್ಸ್ ಮೂಲಕ ರಾಜ್ಯ ಪ್ರಭಾರಿಗಳು ಮತ್ತು ರಾಜ್ಯಾಧ್ಯಕ್ಷರೊಂದಿಗೆ ಗುರುವಾರ ಚರ್ಚೆ ನಡೆಸಿದ್ದಾರೆ.
ಕೃಷಿ ಕಾನೂನುಗಳ ಬಗ್ಗೆ ಪ್ರತಿಪಕ್ಷಗಳು ವದಂತಿಗಳನ್ನು ಹರಡುತ್ತಿವೆ. ನೂತನ ಕಾನೂನುಗಳ ಬಗ್ಗೆಗಿನ ವಂದತಿಗಳು ಹಾಗೂ ಕೃಷಿ ಸುಧಾರಣೆ ಬಗ್ಗೆ ಬಿಜೆಪಿ ಮುಖಂಡರು, ಕಾರ್ಯಕರ್ತರು, ರೈತರಿಗೆ ವಿವರಣೆ ನೀಡಲಿದ್ದಾರೆ ಎಂದು ಬಿಜೆಪಿ ಮುಖಂಡರು ಹೇಳಿದ್ದಾರೆ.
ಈ ಮಧ್ಯೆ ಕೇಂದ್ರ ಸರ್ಕಾರದ ನೂತನ ಕೃಷಿ ಕಾನೂನುಗಳ ವಿರುದ್ಧ ಭಾರತೀಯ ಕಿಸಾನ್ ಯೂನಿಯನ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ರೈತ ಸಂಘಟನೆಗಳು ಕೂಡಾ ಯೋಜನೆ ಹಾಕಿಕೊಂಡಿವೆ.
ದೆಹಲಿ ಸಂಪರ್ಕಿಸುವ ಎಲ್ಲಾ ರಸ್ತೆಗಳನ್ನು ಬಂದ್ ಮಾಡಲು ತೀರ್ಮಾನಿಸಿದ್ದಾರೆ. ಡಿಸೆಂಬರ್ 14 ರಂದು ಮತ್ತೊಂದು ದೆಹಲಿ ಚಲೋ ಪ್ರತಿಭಟನಾ ಮೆರವಣಿಗೆ ನಡೆಸಲು ನಿರ್ಧರಿಸಿದ್ದಾರೆ.