ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧಂಕರ್ 
ದೇಶ

'ಕಾನೂನು ಉಲ್ಲಂಘಿಸುವವರಿಗೆ ಪೊಲೀಸರ ರಕ್ಷಣೆ': ಮಮತಾ ಬ್ಯಾನರ್ಜಿ ಸರ್ಕಾರ ವಿರುದ್ಧ ಹರಿಹಾಯ್ದ ರಾಜ್ಯಪಾಲ

ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ ಅವರ ಬೆಂಗಾವಲು ವಾಹನದ ಮೇಲೆ ನಡೆದ ದಾಳಿ ಪ್ರಕರಣದ ಬಗ್ಗೆ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಿರುವುದಾಗಿ ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧನ್ಕರ್ ತಿಳಿಸಿದ್ದಾರೆ.

ಕೋಲ್ಕತ್ತಾ: ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ ಅವರ ಬೆಂಗಾವಲು ವಾಹನದ ಮೇಲೆ ನಡೆದ ದಾಳಿ ಪ್ರಕರಣದ ಬಗ್ಗೆ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಿರುವುದಾಗಿ ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧನ್ಕರ್ ತಿಳಿಸಿದ್ದಾರೆ.

ದಾಳಿಗೆ ಸಂಬಂಧಪಟ್ಟಂತೆ ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಸರ್ಕಾರದ ಮೇಲೆ ಹರಿಹಾಯ್ದ ಅವರು, ಒಳಗಿನವರು ಮತ್ತು ಹೊರಗಿನವರ ಮಧ್ಯೆ ಅಪಾಯಕಾರಿ ಆಟ ನಡೆಯುತ್ತಿದೆ. ಅಂತಾರಾಷ್ಟ್ರೀಯ ಮಾನವ ಹಕ್ಕು ದಿನವೇ ಇಂತಹ ದಾಳಿ ನಡೆದಿರುವುದು ನಾಚಿಕೆಗೇಡಿನ ಸಂಗತಿ ಎಂದು ಹೇಳಿದ್ದಾರೆ.

ನಾನು ದಾಳಿ ಸಂಬಂಧ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಿದ್ದು ಅದರ ವಿಷಯಗಳನ್ನು ಸ್ವಾಮ್ಯದ ಕಾರಣದಿಂದ ಹಂಚಿಕೊಳ್ಳಲಾಗುವುದಿಲ್ಲ ಎಂದು ಇಂದು ರಾಜಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡುತ್ತಾ ಹೇಳಿದರು.

ಪಶ್ಚಿಮ ಬಂಗಾಳದಲ್ಲಿ ಕಾನೂನು, ಸುವ್ಯವಸ್ಥೆ ಉಲ್ಲಂಘಿಸಿದವರಿಗೆ ಪೊಲೀಸರ, ಆಡಳಿತಗಾರರ ರಕ್ಷಣೆಯಿದೆ. ಅದರಿಂದಾಗಿಯೇ ಇಂತಹ ಸಮಾಜಘಾತುಕ ಕೃತ್ಯವೆಸಗಲು ಧೈರ್ಯ ಬರುತ್ತದೆ. ಸಂವಿಧಾನವನ್ನು ರಕ್ಷಿಸುವುದು ತಮ್ಮ ಗುರಿ. ದಕ್ಷತೆ, ನಿಖರತೆಯನ್ನು ಜಾರಿಗೆ ತರಲು ಶ್ರಮಿಸಲಾಗುವುದು, ಬೆಂಕಿಯೊಂದಿಗೆ ಸರಸವಾಡಬೇಡಿ ಎಂದು ರಾಜ್ಯಪಾಲರು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತೀಯ ನಾವಿಕರ ಸುರಕ್ಷತೆ ಮುಖ್ಯ; ನಾಗರಿಕ ಮೂಲಸೌಕರ್ಯಗಳ ಮೇಲಿನ ದಾಳಿ ಸ್ವೀಕಾರಾರ್ಹವಲ್ಲ: ಇರಾನ್‌ಗೆ ಅಜಿತ್ ದೋವಲ್

ಜರ್ಮನಿಯ ವಸತಿ ಕಟ್ಟಡದಲ್ಲಿ ಶಂಕಿತ ಬೆಂಕಿ ಅವಘಡ: 3 ಭಾರತೀಯರು ಸಾವು!

ಹನಿಟ್ರ್ಯಾಪ್ ಪಿತೂರಿ ಪ್ರಶ್ನಿಸಿದ್ದಕ್ಕೆ ಕಿರುಕುಳ; JDS ಕಾರ್ಯಕರ್ತ CCB ವಶಕ್ಕೆ: ಕುಮಾರಸ್ವಾಮಿ ಆಕ್ರೋಶ

ಕಾಂಗ್ರೆಸ್‌ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ ವಿಜಯೇಂದ್ರ; Video

ಯೂಟ್ಯೂಬರ್ ಧ್ರುವ್ ರಾಠಿಗೆ ಸಂಕಷ್ಟ: 8 ವರ್ಷಗಳ ಹಿಂದಿನ ಪ್ರಕರಣಕ್ಕೆ ಮರುಜೀವ; ದೆಹಲಿ ಕೋರ್ಟ್ ಸಮನ್ಸ್!