ಕೋವಿಡ್-19: ದೇಶದಲ್ಲಿಂದು 29,398 ಕೇಸ್ ಪತ್ತೆ; ಸೋಂಕಿತರ ಸಂಖ್ಯೆ 97.96 ಲಕ್ಷ
ದೇಶದಲ್ಲಿ ಶುಕ್ರವಾರ 29,398 ಕೇಸ್ ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 97,96,770ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ನವದೆಹಲಿ: ದೇಶದಲ್ಲಿ ಶುಕ್ರವಾರ 29,398 ಕೇಸ್ ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 97,96,770ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ನಿನ್ನೆ ಒಂದೇ ದಿನ 414 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಕೂಡ 1,42,186ಕ್ಕೆ ಏರಿಕೆಯಾಗಿದೆ ಎಂದು ಸಚಿವಾಲಯ ತಿಳಿಸಿದೆ.
ಒಟ್ಟಾರೆ 97,96,770.ಮಂದಿ ಸೋಂಕಿತರ ಪೈಕಿ ನಿನ್ನೆ ಒಂದೇ ದಿನ 37,528 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಈ ವರೆಗೂ ಗುಣಮುಖರಾದವರ ಸಂಖ್ಯೆ 92,90,834ಕ್ಕೆ ಏರಿಕೆಯಾಗಿದೆ.
ಗುಣಮುಖರಾಗುತ್ತಿರುವವರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದೆ. ಪ್ರಸ್ತುತ ದೇಶದಲ್ಲಿ 3,63,749 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದುಬಂದಿದೆ.