ದೇಶ

ಜೆಪಿ ನಡ್ಡಾ ಬೆಂಗಾವಲು ಮೇಲೆ ದಾಳಿ: ಮತ್ತೆ 8 ಮಂದಿ ಬಂಧನ

Lingaraj Badiger

ಕೋಲ್ಕತಾ: ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿದ ವೇಳೆ ಅವರ ಬೆಂಗಾವಲು ಪಡೆಯ ಮೇಲೆ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ 8 ಮಂದಿಯನ್ನು ಬಂಧಿಸಲಾಗಿದೆ ಎಂದು ಶನಿವಾರ ಅಧಿಕಾರಿಗಳು ತಿಳಿಸಿದ್ದಾರೆ.

ಡೈಮಂಡ್ ಹಾರ್ಬರ್‌ನಲ್ಲಿ ಜೆ ಪಿ ನಡ್ಡಾ ಅವರ ಬೆಂಗಾವಲು ಮೇಲೆ ನಡೆದ ದಾಳಿಯಲ್ಲಿ ಭಾಗಿಯಾದ ಆರೋಪದ ಮೇಲೆ ದಕ್ಷಿಣ 24 ಪರಗಣ ಜಿಲ್ಲೆಯ ವಿವಿಧ ಭಾಗಗಳಿಂದ ಎಂಟು ಜನರನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ. ಇದರೊಂದಿಗೆ ಬಿಜೆಪಿ ನಾಯಕನ ಮೇಲಿನ ದಾಳಿಗೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟವರ ಸಂಖ್ಯೆ 15 ಕ್ಕೆ ಏರಿದೆ.

ಇಂದು ಬಂಧಿಸಲ್ಪಟ್ಟ ಎಲ್ಲ ಎಂಟು ಆರೋಪಿಗಳ ವಿರುದ್ಧ ಗಲಭೆ, ಸಾರ್ವಜನಿಕ ಸೇವೆಗೆ ಅಡ್ಡಿಪಡಿಸಿದ ಮತ್ತು ಇತರೆ ಸೆಕ್ಷನ್ ಗಳಡಿ ಕೇಸ್ ದಾಖಲಿಸಲಾಗಿದೆ.

ಈ ಎಂಟು ಆರೋಪಿಗಳನ್ನು ಕೋರ್ಟ್ ಗೆ ಹಾಜರುಪಡಿಸಲಾಗಿದ್ದು, ವಿಚಾರಣೆ ನಡೆಸಿದ ಕೋರ್ಟ್ ಹೆಚ್ಚಿನ ವಿಚಾರಣೆಗಾಗಿ ಆರೋಪಿಗಳನ್ನು ಆರು ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಲಾಗಿದೆ.

ಜೆಪಿ ನಡ್ಡಾ ಅವರು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಪ್ರತಿನಿಧಿಸುವ ಡೈಮಂಡ್ ಹಾರ್ಬರ್‌ ಲೋಕಸಭಾ ಕ್ಷೇತ್ರಕ್ಕೆ ಹೋಗುವ ಸಂದರ್ಭದಲ್ಲಿ ನಡ್ಡಾ ಬೆಂಗಾವಲು ಮೇಲೆ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ದೊಣ್ಣೆ ಮತ್ತು ಕೋಲುಗಳಿಂದ ದಾಳಿ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

SCROLL FOR NEXT