ಪ್ರಧಾನಿ ಮೋದಿ 
ದೇಶ

ಪ್ಯಾರಿಸ್ ಒಪ್ಪಂದದ ಗುರಿ ಸಾಧಿಸುವ ಹಾದಿಯಲ್ಲಿ ಭಾರತ: ಪ್ರಧಾನಿ ಮೋದಿ

ಪ್ಯಾರಿಸ್ ಒಪ್ಪಂದದ ಗುರಿ ಸಾಧಿಸುವ ಹಾದಿಯಲ್ಲಿ ಭಾರತ ಸಾಗುತ್ತಿದ್ದು, ನಿರೀಕ್ಷೆಗೂ ಮೀರಿ ಗುರಿಯನ್ನು ಸಾಧಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ.

ನವದೆಹಲಿ: ಪ್ಯಾರಿಸ್ ಒಪ್ಪಂದದ ಗುರಿ ಸಾಧಿಸುವ ಹಾದಿಯಲ್ಲಿ ಭಾರತ ಸಾಗುತ್ತಿದ್ದು, ನಿರೀಕ್ಷೆಗೂ ಮೀರಿ ಗುರಿಯನ್ನು ಸಾಧಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ.

ಪ್ಯಾರಿಸ್ ಒಪ್ಪಂದದ ಐದನೇ ವಾರ್ಷಿಕೋತ್ಸವ ಅಂಗವಾಗಿ ಆಯೋಜಿಲಾಗಿದ್ದ ‘ಹವಾಮಾನ ಮಹತ್ವಾಕಾಂಕ್ಷೆ ಶೃಂಗಸಭೆ’ಯನ್ನು ವಿಡಿಯೋಕಾನ್ಫರೆನ್ಸ್ ಮೂಲಕ ಉದ್ದೇಶಿಸಿ ಮಾತನಾಡಿದ ಪ್ರಧಾನಿ, ‘ನಾವು ನಮ್ಮ ಮಹತ್ವಾಕಾಂಕ್ಷೆಗಳನ್ನು ಪರಿಷ್ಕರಿಸುವುದು ಮಾತ್ರವಲ್ಲದೆ, ಈಗಾಗಲೇ ನಿಗದಿಪಡಿಸಿದ ಗುರಿಗಳ ಪ್ರತಿಯಾಗಿ ನಮ್ಮ ಸಾಧನೆಗಳನ್ನು ಪರಿಶೀಲಿಸಬೇಕಾಗಿದೆ.’ ಎಂದು ಹೇಳಿದ್ದಾರೆ.

ಭಾರತದಲ್ಲಿ 2005ರ ಮಟ್ಟಕ್ಕಿಂತ ಇಂಗಾಲ ಹೊರಸೂಸುವಿಕೆಯ ಪ್ರಮಾಣವನ್ನು ಶೇ 21 ರಷ್ಟು ಕಡಿಮೆ ಮಾಡಲಾಗಿದೆ. 2014ರಲ್ಲಿ 2.63 ಗಿಗಾವಾಟ್ಸ್‌ನಷ್ಟಿದ್ದ ದೇಶದ ಸೌರ ಸಾಮರ್ಥ್ಯ 2020ರಲ್ಲಿ 36 ಗಿಗಾವಾಟ್‌ಗೆ ವೃದ್ಧಿಸಿದೆ. ದೇಶದ ನವೀಕರಿಸಬಹುದಾದ ಇಂಧನ ಸಾಮರ್ಥ್ಯ ವಿಶ್ವದಲ್ಲೇ ನಾಲ್ಕನೇ ದೊಡ್ಡದೆನಿಸಿದೆ. ಈ ಸಾಮರ್ಥ್ಯ 2022ರ ವೇಳೆಗೆ 175 ಗಿಗಾವಾಟ್‌ಗೆ ತಲುಪಲಿದೆ. ಸದ್ಯ ಇನ್ನೂ ಹೆಚ್ಚಿನ ಮಹತ್ವಾಕಾಂಕ್ಷೆಯ ಗುರಿಯನ್ನು ಭಾರತ ಹೊಂದಿದೆ ಎಂದರು.

2030ರ ವೇಳೆಗೆ ನವೀಕರಿಸಬಹುದಾದ ಇಂಧನ ಸಾಮರ್ಥ್ಯದ 450 ಗಿಗಾವಾಟ್‌ಗೆ ವೃದ್ಧಿಸುವ ನಿರೀಕ್ಷೆ ಇದೆ. ಅರಣ್ಯ ವ್ಯಾಪ್ತಿಯನ್ನು ವಿಸ್ತರಿಸುವಲ್ಲಿ ಮತ್ತು ಜೀವವೈವಿಧ್ಯತೆಯನ್ನು ಕಾಪಾಡುವಲ್ಲಿ ಭಾರತ ಯಶಸ್ವಿಯಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

SCROLL FOR NEXT