ದೇಶ

ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ರಕ್ತ ಸೌಲಭ್ಯವನ್ನು ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಸರ್ಕಾರ

Nagaraja AB

ಮುಂಬೈ: ಇಂದಿನಿಂದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಉಚಿತವಾಗಿ ರಕ್ತವನ್ನು ಒದಗಿಸುವ ಸೌಲಭ್ಯವನ್ನು ಜಾರಿಗೆ ತರಲು ಮಹಾರಾಷ್ಟ್ರ ಸರ್ಕಾರದ ಆರೋಗ್ಯ ಇಲಾಖೆ ಶುಕ್ರವಾರ ಅಧಿಸೂಚನೆ ಹೊರಡಿಸಿದೆ.

ಮಹಾರಾಷ್ಟ್ರದಲ್ಲಿ ಕೊರೋನಾವೈರಸ್ ಸಾಂಕ್ರಾಮಿಕ ರೋಗದ ಪರಿಸ್ಥಿತಿ ಮುಂದುವರೆದಿರುವಂತೆ ಸರ್ಕಾರ ಈ ಅಧಿಸೂಚನೆ ಹೊರಡಿಸಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಾರ ಮಹಾರಾಷ್ಟ್ರದಲ್ಲಿ 74, 408 ಸಕ್ರಿಯ ಪ್ರಕರಣಗಳಿವೆ.

ಡಿಸೆಂಬರ್ 12 ರಿಂದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ರಕ್ತವಾಗಿ ದೊರೆಯುವಂತೆ ಮಾಡಲಾಗುತ್ತಿದೆ ಎಂದು ಗುರುವಾರ ಆರೋಗ್ಯ ಸಚಿವ ರಾಜೇಶ್ ಟೊಪ್ ಪ್ರಕಟಿಸಿದ್ದರು.  ನಾಗರಿಕರು ರಕ್ತವನ್ನು ನೀಡುವಂತೆ ಪ್ರೋತ್ಸಾಹಿಸಿ ಗುರುವಾರ ಅವರು ಟ್ವೀಟ್ ಮಾಡಿದ್ದರು.

ರಾಜ್ಯದಲ್ಲಿ ರಕ್ತದ ಕೊರತೆಯಿಂದಾಗಿ ನಾನು ಮತ್ತು ಸುಪ್ರೀಯಾ ಸುಳೆ, ನಾಗರಿಕರು ರಕ್ತದಾನ ಮಾಡುವಂತೆ ಮನವಿ ಮಾಡಿರುವುದಾಗಿ ರಾಜೇಶ್ ಟೊಪ್ ಟ್ವೀಟರ್ ನಲ್ಲಿ ತಿಳಿಸಿದ್ದರು.

SCROLL FOR NEXT