ದೇಶ

ನಡ್ಡಾ ಭೇಟಿ ವೇಳೆ ಭದ್ರತಾ ಲೋಪ: ಪ.ಬಂಗಾಳದ ಮೂವರು ಐಪಿಎಸ್ ಅಧಿಕಾರಿಗಳು ಕೇಂದ್ರ ಸೇವೆಗೆ ನಿಯೋಜನೆ; ಗೃಹ ಇಲಾಖೆ ಕ್ರಮ

Nagaraja AB

ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಭೇಟಿ ವೇಳೆಯಲ್ಲಿ ಭದ್ರತಾ ಲೋಪ ಆರೋಪದ ಮೇರೆಗೆ ಕೇಂದ್ರ ಸೇವೆಗೆ ನಿಯೋಜಿಸಲು ಪಶ್ಚಿಮ ಬಂಗಾಳದ ಮೂವರು ಐಪಿಎಸ್ ಅಧಿಕಾರಿಗಳಿಗೆ ಕೇಂದ್ರ ಗೃಹ ಸಚಿವಾಲಯ ಶನಿವಾರ ಏಕಪಕ್ಷೀಯವಾಗಿ ಸಮನ್ಸ್  ಜಾರಿ ಮಾಡಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಭದ್ರತೆಯ ಜವಾಬ್ದಾರಿಯನ್ನು ಈ ಮೂವರು ಅಧಿಕಾರಿಗಳು ಹೊತ್ತಿದ್ದರು.

ಎರಡು ದಿನಗಳ ಹಿಂದೆ ಜೆ. ಪಿ. ನಡ್ಡಾ ಅವರ ಬೆಂಗಾವಲು ಪಡೆ ಮೇಲೆ ನಡೆದ ದಾಳಿ ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಸರ್ಕಾರ ಹಾಗೂ ಕೇಂದ್ರದ ಬಿಜೆಪಿ ಸರ್ಕಾರ ನಡುವಣ ಭಿನ್ನಾಭಿಪ್ರಾಯ ತಲೆದೋರಿರುವಂತೆ, ಈ ಬೆಳವಣಿಗೆ ಮತ್ತಷ್ಟು ಪರಿಣಾಮ ಬೀರುವ ಸಾಧ್ಯತೆಯಿದೆ.

ಜೆಪಿ ನಡ್ಡಾ ಅವರ ಬೆಂಗಾವಲು ಪಡೆ ಮೇಲಿನ ದಾಳಿಗೆ ಭದ್ರತಾ ಲೋಪದ ಆರೋಪದ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ಕೇಡರ್ ಗೆ ಸೇರಿದ ಮೂವರು ಐಪಿಎಸ್ ಅಧಿಕಾರಿಗಳನ್ನು ಕೇಂದ್ರ ಸೇವೆಗೆ ನಿಯೋಜನೆ ಮಾಡಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯ ಅಧಿಕಾರಿಗಳು ತಿಳಿಸಿದ್ದಾರೆ. ಅಖಿಲ ಭಾರತ ಸೇವಾ ಅಧಿಕಾರಿಗಳ ಸರ್ಕಾರಿ ನಿಯದ ಪ್ರಕಾರವೇ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

ಸಾಮಾನ್ಯವಾಗಿ ಯಾವುದೇ ಅಖಿಲ ಭಾರತೀಯ ಸೇವೆಯಲ್ಲಿರುವ ಅಧಿಕಾರಿಗಳನ್ನು ಕೇಂದ್ರ ಸೇವೆಗೆ ನಿಯೋಜಿಸುವ ಮುಂಚೆ ರಾಜ್ಯಸರ್ಕಾರಗಳ ಅನುಮತಿಯನ್ನು ಪಡೆಯಲಾಗುತ್ತದೆ. ಆದರೆ, ಪಶ್ಚಿಮ ಬಂಗಾಳ ಸರ್ಕಾರದ ಅನುಮತಿ ಪಡೆಯದೇ ಏಕಪಕ್ಷೀಯವಾಗಿ ಕೇಂದ್ರ ಸೇವೆಗೆ ಮೂವರು ಐಪಿಎಸ್ ಅಧಿಕಾರಿಗಳನ್ನು ಕೇಂದ್ರ ಗೃಹ ಸಚಿವಾಲಯ ನಿಯೋಜಿಸಿದೆ.

SCROLL FOR NEXT