ದೇಶ

ಬಿಜೆಪಿ ವಿರುದ್ಧ ಪ್ರತಿಭಟನೆ: ಆಮ್ ಆದ್ಮಿಯ 4 ಶಾಸಕರು ವಶಕ್ಕೆ

Srinivas Rao BV

ದೆಹಲಿ ಪುರಸಭೆ ನಿಗಮಗಳಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದವರ ಪೈಕಿ ನಾಲ್ವರು ಆಮ್ ಆದ್ಮಿ ಪಕ್ಷದ ಶಾಸಕರನ್ನು ವಶಕ್ಕೆ ಪಡೆಯಲಾಗಿದೆ. 

ಪ್ರತಿಭಟನಾ ನಿರತರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನಿವಾಸದ ಎದುರು ಪ್ರತಿಭಟನೆ ನಡೆಸಲು ತೆರಳುತ್ತಿದ್ದಾಗ ಮಾರ್ಗಮಧ್ಯದಲ್ಲಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 

ಬಿಜೆಪಿ ಆಡಳಿತವಿರುವ ಉತ್ತರ ದೆಹಲಿ ಹಾಗೂ ದಕ್ಷಿಣ ದೆಹಲಿ ಪುರಸಭೆ ನಿಗಮಗಳಲ್ಲಿ 2,400 ಕೋಟಿ ರೂಪಾಯಿಗಳಷ್ಟು ಅವ್ಯವಹಾರ ನಡೆದಿದೆ. ಈ ಸಂಬಂಧ ಸಿಬಿಐ ತನಿಖೆಯಾಗಬೇಕು ಎಂಬುದು ಪ್ರತಿಭಟನಾ ನಿರತ ಆಮ್ ಆದ್ಮಿ ಪಕ್ಷದ ನಾಯಕರ ಆಗ್ರಹವಾಗಿದ್ದು, ಬೇಡಿಕೆ ಈಡೇರುವವರೆಗೂ ಗೃಹ ಸಚಿವ ಅಮಿತ್ ಶಾ ಹಾಗೂ ಲೆಫ್ಟಿನೆಂಟ್ ಗೌರ್ನರ್ ಅನಿಲ್ ಬೈಜಲ್ ಅವರ ನಿವಾಸದೆದುರು ಪ್ರತಿಭಟನೆಗೆ ಸಜ್ಜಾಗಿದ್ದರು.

ಗೃಹ ಸಚಿವರ ನಿವಾಸಕ್ಕೆ ತೆರಳುತ್ತಿದ್ದಾಗ ಮಾರ್ಗಮಧ್ಯದಲ್ಲಿ ಆಮ್ ಆದ್ಮಿಯ ರಾಘವ್ ಚಂಢಾ ಹಾಗೂ ಇನ್ನಿತರ 9 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕೊರೋನಾ ಹಿನ್ನೆಲೆಯಲ್ಲಿ ಗುಂಪು ಕಟ್ಟಿಕೊಂಡು ಜನ ಸೇರುವ ಎಲ್ಲಾ ಕಾರ್ಯಕ್ರಮಗಳಿಗೂ ಡಿ.31 ವರೆಗೂ ನಿರ್ಬಂಧ ವಿಧಿಸಲಾಗಿದೆ ಎಂದು ಪೊಲೀಸರು ರಾಘವ್ ಚಂಢಾಗೆ ಅನುಮತಿ ನಿರಾಕರಿಸಿದ್ದರು.
 

SCROLL FOR NEXT