ಸಾಂದರ್ಭಿಕ ಚಿತ್ರ 
ದೇಶ

ಉತ್ತರ ಪ್ರದೇಶ: ಸ್ನೇಹಿತನ ಹೆಂಡತಿಯ ಮೇಲೆ ಅತ್ಯಾಚಾರ, ಆರ್ಮಿ ಕರ್ನಲ್ ವಿರುದ್ಧ ಕೇಸ್ ದಾಖಲು

ಸ್ನೇಹಿತನ ಹೆಂಡತಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಿಯೋಜನೆಗೊಂಡಿದ್ದ ಸೇನಾ ಕರ್ನಲ್ ಒಬ್ಬರ ವಿರುದ್ಧ ಭಾನುವಾರ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾನ್ಪುರ: ಸ್ನೇಹಿತನ ಹೆಂಡತಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಿಯೋಜನೆಗೊಂಡಿದ್ದ ಸೇನಾ ಕರ್ನಲ್ ಒಬ್ಬರ ವಿರುದ್ಧ ಭಾನುವಾರ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂತ್ರಸ್ತೆಯ ಪತಿ, ಕಂಟೋನ್ಮೆಂಟ್ ಪೊಲೀಸ್ ಠಾಣೆಯಲ್ಲಿ ಸೇನಾಧಿಕಾರಿ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ(ಪೂರ್ವ) ರಾಜ್ ಕುಮಾರ್ ಅಗರ್ವಾಲ್ ಹೇಳಿದ್ದಾರೆ.

ದೂರುದಾರರ ಪ್ರಕಾರ, ಅವರ ಪತ್ನಿ ರಷ್ಯಾ ಮೂಲದವರಾಗಿದ್ದು, 10 ವರ್ಷಗಳಿಂದ ಭಾರತದಲ್ಲಿ ವಾಸಿಸುತ್ತಿದ್ದಾರೆ.

ಲೆಫ್ಟಿನೆಂಟ್ ಹುದ್ದೆಯಿಂದ ಕರ್ನಲ್ ಹುದ್ದೆಗೆ ಬಡ್ತಿ ಪಡೆದ ಸಂದರ್ಭದಲ್ಲಿ ಕರ್ನಲ್ ತನ್ನ ಹೆಂಡತಿ ಮತ್ತು ತಮ್ಮನ್ನು ಪಾರ್ಟಿಗೆ ಆಹ್ವಾನಿಸಿದ್ದರು. ನಾವು ಇಬ್ಬರೂ ಪಾರ್ಟಿಗೆ ತೆರಳಿದ ವೇಳೆ ಕರ್ನಲ್ ಸ್ನೇಹಿತ ತನ್ನ ಪತ್ನಿಯ ಪ್ರಜ್ಞೆ ತಪ್ಪಿಸಲು ತನ್ನ ಮಾದಕ ದ್ರವ್ಯವನ್ನು ನೀಡಿ, ಆಕೆ ಪ್ರಜ್ಞೆ ತಪ್ಪಿದ ಬಳಿಕ ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆಯ ಪತಿ ಎಫ್‌ಐಆರ್‌ನಲ್ಲಿ ತಿಳಿಸಿದ್ದಾರೆ.

ನನ್ನ ಪತ್ರಿ ಪ್ರತಿರೋಧ ವ್ಯಕ್ತಪಡಿಸಿದಾಗ ಆಕೆಯ ಮೇಲೆ ಕರ್ನಲ್ ಹಲ್ಲೆ ಮಾಡಿದ್ದಾರೆ ಎಂದು ಪತಿ ಆರೋಪಿಸಿದ್ದಾರೆ.

ಈ ಸಂಬಂಧ ಪೊಲೀಸರು ಕರ್ನಲ್ ವಿರುದ್ಧ ಕೇಸ್ ದಾಖಲಿಸಿಕೊಂಡಿದ್ದು, ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Nationwide strike: 'ಕಾರ್ಮಿಕ ನೀತಿ' ವಿರೋಧಿಸಿ ದೇಶಾದ್ಯಂತ ಮುಷ್ಕರ: 30 ಕೋಟಿ ಕಾರ್ಮಿಕರು ಭಾಗಿ, ಬ್ಯಾಂಕಿಂಗ್, ವಿದ್ಯುತ್ ಸೇವೆ ವ್ಯತ್ಯಯ!

'ಲೋಕಸಭೆ ವಿಪಕ್ಷ ನಾಯಕನ ಸ್ಥಾನಕ್ಕೆ ಹೊಂದುವ ಜವಾಬ್ದಾರಿಯುತ ವ್ಯಕ್ತಿ ದೇಶದಲ್ಲಿಲ್ಲದಿರುವುದು ದುರದೃಷ್ಟಕರ'

ಸ್ಪೀಕರ್ ಕೊಠಡಿಯಲ್ಲಿ ಕಾಂಗ್ರೆಸ್ ಸಂಸದರಿಂದ ಓಂ ಬಿರ್ಲಾ ಗೆ ನಿಂದನೆ, ಪ್ರಿಯಾಂಕಾ ಸಂಸದರನ್ನು ತಡೆಯಲಿಲ್ಲ- ರಿಜಿಜು

Thai school shooting: ಶಾಲೆ ಮೇಲೆ ಗುಂಡಿನ ಮಳೆ, 22 ಮಕ್ಕಳು ಸೇರಿ ಕನಿಷ್ಟ 34 ಸಾವು, ದಾಳಿಕೋರ ಪೊಲೀಸ್ ವಶಕ್ಕೆ!

ನರವಾಣೆ ಪುಸ್ತಕ ವಿವಾದ: 'ನಂಬರ್ ಒನ್' ಶಂಕಿತ, ಪೆಂಗ್ವಿನ್ ಪಬ್ಲಿಕೇಷನ್ಸ್‌ಗೆ ನೋಟಿಸ್ ಜಾರಿ ಮಾಡಿದ ದೆಹಲಿ ಪೊಲೀಸರು!

SCROLL FOR NEXT