ದೇಶ

ತೀವ್ರಗೊಂಡ ರೈತರ ಪ್ರತಿಭಟನೆ: ದೆಹಲಿ ಗಡಿಯಲ್ಲಿ ಹೆಚ್ಚಿನ ಬಿಗಿಭದ್ರತೆ

Manjula VN

ನವದೆಹಲಿ: ಕೇಂದ್ರ ಸರಕಾರದ ಹೊಸ ಕೃಷಿ ಕಾಯ್ದೆ ವಿರೋಧಿಸಿ ಜೈಪುರ-ದೆಹಲಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲು ರೈತರು ಕರೆ ನೀಡಿರುವ ಕಾರಣ ದೆಹಲಿ ಗಡಿಯಲ್ಲಿ ಭದ್ರತೆ ಬಿಗಿಗೊಳಿಸಲಾಗಿದೆ.

ಹೊಸ ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಸಾವಿರಾರು ರೈತರು ಎರಡು ವಾರಗಳಿಂದ ದೆಹಲಿಯ ವಿವಿಧ ಗಡಿ ಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ ಭಾನುವಾರದಿಂದ ದೆಹಲಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ಹೆದ್ದಾರಿಗಳನ್ನು ಬಂದ್ ಮಾಡಿ ನಾಳೆ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ರೈತರು ಎಚ್ಚರಿಸಿದ್ದಾರೆ.

ಜನರಿಗೆ ತೊಂದರೆಯಾಗದಂತೆ ಸಾಕಷ್ಟು ವ್ಯವಸ್ಥೆಗಳನ್ನು ಮಾಡಲಾಗಿದೆ ಮತ್ತು ಇದರಲ್ಲಿ ಬಹು-ಪದರದ ಬ್ಯಾರಿಕೇಡ್ ಗಳು ಮತ್ತು ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸುವುದು ಸೇರಿವೆ. ಪ್ರತಿಭಟನೆ ನಡೆಯುವ ಸ್ಥಳಗಳಲ್ಲಿ ಪ್ರಯಾಣಿಕರಿಗೆ ಅನಾನುಕೂಲವಾಗದಂತೆ ಕ್ರಮ ಕೈಗೊಳ್ಳಲಾಗಿದೆ. ಹೊಸ ಕೃಷಿ ಕಾನೂನುಗಳಿಗೆ ತಿದ್ದುಪಡಿ ತರುವ ಸರಕಾರದ ಪ್ರಸ್ತಾವನೆಯನ್ನು ರೈತ ಮುಖಂಡರು ಬುಧವಾರ ತಿರಸ್ಕರಿಸಿದ ನಂತರ ಈ ಬೆಳವಣಿಗೆಗಳು ಕಾಣಿಸಿಕೊಂಡಿವೆ.

SCROLL FOR NEXT