ಪ್ರಧಾನಿ ಮೋದಿ 
ದೇಶ

2001 ಸಂಸತ್ ದಾಳಿ: ಹೇಡಿತನದ ಕೃತ್ಯವನ್ನು ನಾವೆಂದಿಗೂ ಮರೆಯುವುದಿಲ್ಲ- ಪ್ರಧಾನಿ ಮೋದಿ

2001 ಸಂಸತ್ತಿನ ಮೇಲೆ ನಡೆದ ಹೇಡಿತನದ ದಾಳಿಯನ್ನು ನಾವೆಂದಿಗೂ ಮರೆಯುವುದಿಲ್ಲ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಹೇಳಿದ್ದಾರೆ. 

ನವದೆಹಲಿ: 2001 ಸಂಸತ್ತಿನ ಮೇಲೆ ನಡೆದ ಹೇಡಿತನದ ದಾಳಿಯನ್ನು ನಾವೆಂದಿಗೂ ಮರೆಯುವುದಿಲ್ಲ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಹೇಳಿದ್ದಾರೆ. 

ಡಿಸೆಂಬರ್ 13, 2001ರಂದು ರಾಜಧಾನಿ ದೆಹಲಿಯಲ್ಲಿ ಸಂಸತ್ ಮೇಲೆ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಭಯೋತ್ಪಾದಕರು ಭೀಕರ ದಾಳಿ ನಡೆಸಿದ್ದರು. ದಾಳಿಯಲ್ಲಿ ಆರು ಪೊಲೀಸರು ಸೇರಿದಂತೆ ಒಟ್ಟು 79 ಮಂದಿ ಭಯೋತ್ಪಾಕರ ಕೌರ್ಯಕ್ಕೆ ಬಲಿಯಾಗಿ, 22 ಮಂದಿ ಗಂಭೀರವಾಗಿ ಗಾಯಗೊಂಡಿದ್ದರು. 

ದೇಶದ ಶಕ್ತಿ ಕೇಂದ್ರ ಸಂಸತ್ ಭವನದ ಮೇಲೆ ಪಾಕಿಸ್ತಾನ ಬೆಂಬಲಿತ ಉಗ್ರರು ಭಯಾನಕ ದಾಳಿ ನಡೆಸಿದ ಇಂದಿಗೆ 19 ವರ್ಷಗಳು ಕಳೆದಿವೆ.

ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿಯವರು, 2001 ರಲ್ಲಿ ಈ ದಿನ ನಮ್ಮ ಸಂಸತ್ತಿನ ಮೇಲೆ ನಡೆದ ಹೇಡಿತನದ ದಾಳಿಯನ್ನು ನಾವು ಎಂದಿಗೂ ಮರೆಯುವುದಿಲ್ಲ. ನಮ್ಮ ಸಂಸತ್ತನ್ನು ರಕ್ಷಿಸುವ ಸಲುವಾಗಿ ಪ್ರಾಣ ಕಳೆದುಕೊಂಡವರ ಶೌರ್ಯ ಮತ್ತು ತ್ಯಾಗವನ್ನು ನಾವು ನೆನೆಯುತ್ತಿದ್ದೇವೆ. ವೀರ ಯೋಧರಿಗೆ ನಾವೆಂದಿಗೂ ಕೃತಜ್ಞರಾಗಿರಬೇಕೆಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಾಂಪ್ರದಾಯಿಕ ಮಾಧ್ಯಮಗಳಿಗೆ ಸೆಡ್ಡು ಹೊಡೆದ ಅಮೆರಿಕಾ ಅಧ್ಯಕ್ಷ; ಶ್ವೇತಭವನದಿಂದ 24/7 ‘ಟ್ರಂಪ್ ಟಿವಿ’ ಸ್ಟ್ರೀಮಿಂಗ್ ಆರಂಭ..!

ಕಸ್ತೂರಿರಂಗನ್ ವರದಿ ಗದ್ದಲ: ಮೇಲ್ಮನೆಯಲ್ಲಿ ಸತತ 10 ಗಂಟೆಗಳ ಮಹಾ ಚರ್ಚೆ; ಸರ್ಕಾರದ ನಿಲುವೇನು..?

ರಾಜ್ಯದ ಹಲವೆಡೆ ವರುಣನ ಆರ್ಭಟ: ಬೆಂಗಳೂರು ಸೇರಿ ಪ್ರಮುಖ ಜಿಲ್ಲೆಗಳಿಗೆ yellow ಅಲರ್ಟ್ ಘೋಷಣೆ!

ಕಸ್ತೂರಿರಂಗನ್ ವರದಿ ವಿವಾದ: ವಿಧಾನಸಭೆಯಲ್ಲಿ ಭಾರೀ ಹೈಡ್ರಾಮಾ, ಕಾಂಗ್ರೆಸ್-ಬಿಜೆಪಿ ವಾಕ್ಸಮರ..!

ಕಸ್ತೂರಿರಂಗನ್ ವರದಿ ಜಾರಿಯಾದರೆ ರಕ್ತಪಾತ; ರಾಜ್ಯ ಸರ್ಕಾರಕ್ಕೆ ಆರಗ ಜ್ಞಾನೇಂದ್ರ ಎಚ್ಚರಿಕೆ