ಸಂಗ್ರಹ ಚಿತ್ರ 
ದೇಶ

ದೇಶದಲ್ಲಿಂದು 30,254 ಹೊಸ ಕೇಸ್ ಪತ್ತೆ: 98,57 ಲಕ್ಷಕ್ಕೇರಿದ ಸೋಂಕಿತರ ಸಂಖ್ಯೆ

ದೇಶದಲ್ಲಿಂದು 30,254 ಹೊಸ ಕೇಸ್ ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 98,57,029ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ನವದೆಹಲಿ: ದೇಶದಲ್ಲಿಂದು 30,254 ಹೊಸ ಕೇಸ್ ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 98,57,029ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ನಿನ್ನೆ ಒಂದೇ ದಿನ 391 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 1,43,019.ಕ್ಕೆ ತಲುಪಿದೆ ಎಂದು ಸಚಿವಾಲಯ ತಿಳಿಸಿದೆ.

98,57,029 ಮಂದಿ ಸೋಂಕಿತರಲ್ಲಿ ನಿನ್ನೆ ಒಂದೇ ದಿನ 33,136 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ದೇಶದಲ್ಲಿ ಈ ವರೆಗೂ ಒಟ್ಟಾರೆ 93,57,464 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆಂದು ತಿಳಿದುಬಂದಿದೆ. ಇದರೊಂದಿಗೆ ಪ್ರಸ್ತುತ ದೇಶದಲ್ಲಿ 3,56,546 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಗುಣಮುಖರಾಗುತ್ತಿರುವವರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದೆ. ಪ್ರಸ್ತುತ ದೇಶದಲ್ಲಿ 3,63,749 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದುಬಂದಿದೆ. 

ಭಾರತದಲ್ಲಿ ಒಂದೇ ದಿನ 10,14,434 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ ದೇಶದಲ್ಲಿ 15,37,11,833 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Chalo Supreme Court: ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯಕಾಂತ್; ಸುಪ್ರೀಂ ಕೋರ್ಟ್‌ನತ್ತ ಇಂಡಿಯಾ ಬ್ಲಾಕ್ ಮೆರವಣಿಗೆ!

ಯುವತಿ ಮೇಲೆ ಅತ್ಯಾಚಾರ ಆರೋಪ: ಹುಣಸಮಾರನಹಳ್ಳಿ ಮಠದ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ

ಚುನಾವಣೆ ಘೋಷಣೆಯಾದ್ರೆ 25 ಕಾಂಗ್ರೆಸ್‌ ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ ಹೊಸ ಬಾಂಬ್‌

KPSC ನೇಮಕಾತಿ ಹಗರಣದ ಕಿಂಗ್‌ಪಿನ್ ಬಸವರಾಜ್ ಕನ್ನಾಳೆಗೆ 5 ದಿನ ಜಾಮೀನು ಮಂಜೂರು; ಇಲ್ಲಿದೆ ಕಾರಣ...

ರಸ್ತೆ ಮಧ್ಯೆ ನಮಾಜ್ ಮಾಡುತ್ತಿದ್ದ ಪಾಕ್‌ ಮೂಲದ ವಿದ್ಯಾರ್ಥಿನಿಗೆ ಕಾರು ಢಿಕ್ಕಿ, ಸಾವು; ಚಾಲಕನಿಗೆ ಜೈಲು ಶಿಕ್ಷೆ ವಿನಾಯಿತಿ!