ಬಿಜೆಪಿ-ಕಾಂಗ್ರೆಸ್ 
ದೇಶ

ಅಸ್ಸಾಂ: ಬಿಟಿಸಿ ಚುನಾವಣೆಯಲ್ಲಿ ಗೆದ್ದ ಏಕೈಕ ಕಾಂಗ್ರೆಸ್ ಅಭ್ಯರ್ಥಿ ಸಹ ಬಿಜೆಪಿ ಸೇರ್ಪಡೆ

ಬೋಡೋಲ್ಯಾಂಡ್ ಟೆರಿಟೋರಿಯಲ್ ಕೌನ್ಸಿಲ್(ಬಿಟಿಸಿ) ಚುನಾವಣೆಯಲ್ಲಿ ಗೆಲುವು ಸಾಧಿಸಿದ ಏಕೈಕ ಕಾಂಗ್ರೆಸ್ ಅಭ್ಯರ್ಥಿ ಸಹ ಸೋಮವಾರ ಬಿಜೆಪಿ ಸೇರುವ ಮೂಲಕ ಹೊಸ ಕೌನ್ಸಿಲ್ ನಲ್ಲಿ ಬಿಜೆಪಿ-ಯುಪಿಪಿಎಲ್-ಜಿಎಸ್ ಪಿ ಮೈತ್ರಿಕೂಟದ ಭಾಗವಾಗುವುದಾಗಿ ಸೋಮವಾರ ಘೋಷಿಸಿದ್ದಾರೆ.

ಗುವಾಹಟಿ: ಬೋಡೋಲ್ಯಾಂಡ್ ಟೆರಿಟೋರಿಯಲ್ ಕೌನ್ಸಿಲ್(ಬಿಟಿಸಿ) ಚುನಾವಣೆಯಲ್ಲಿ ಗೆಲುವು ಸಾಧಿಸಿದ ಏಕೈಕ ಕಾಂಗ್ರೆಸ್ ಅಭ್ಯರ್ಥಿ ಸಹ ಸೋಮವಾರ ಬಿಜೆಪಿ ಸೇರುವ ಮೂಲಕ ಹೊಸ ಕೌನ್ಸಿಲ್ ನಲ್ಲಿ ಬಿಜೆಪಿ-ಯುಪಿಪಿಎಲ್-ಜಿಎಸ್ ಪಿ ಮೈತ್ರಿಕೂಟದ ಭಾಗವಾಗುವುದಾಗಿ ಸೋಮವಾರ ಘೋಷಿಸಿದ್ದಾರೆ.

ಶ್ರೀರಾಂಪುರದಲ್ಲಿ ಕಾಂಗ್ರೆಸ್ ನಿಂದ ಆಯ್ಕೆಯಾದ ಸಾಜಲ್ ಸಿನ್ಹಾ ಅವರು ಈಶಾನ್ಯ ಪ್ರಜಾಸತ್ತಾತ್ಮಕ ಒಕ್ಕೂಟ(ಎನ್ ಇಡಿಎ)ದ ಸಂಚಾಲಕ ಹಾಗೂ ಅಸ್ಸಾಂ ಸಚಿವ ಹಿಮಂತ ಬಿಸ್ವಾ ಶರ್ಮಾ ಅವರ ಸಮ್ಮುಖದಲ್ಲಿ ಕೇಸರಿ ಪಕ್ಷ ಸೇರುತ್ತಿರುವುದಾಗಿ ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಿದರು.

ಪಶ್ಚಿಮ ಬಂಗಾಳದ ಗಡಿಯಲ್ಲಿರುವ ತಮ್ಮ ಕ್ಷೇತ್ರದ ಅಭಿವೃದ್ಧಿಯ ಹಿತದೃಷ್ಟಿಯಿಂದ ಬಿಜೆಪಿಗೆ ಸೇರಲು ನಿರ್ಧರಿಸಿದ್ದೇನೆ ಎಂದು ಸಿನ್ಹಾ ಹೇಳಿದ್ದಾರೆ.

ಕಾಂಗ್ರೆಸ್ ಸದಸ್ಯನ ಬಿಜೆಪಿ ಸೇರ್ಪಡೆಯೊಂದಿಗೆ 40 ಸದಸ್ಯ ಬಲದ ಕೌನ್ಸಿಲ್ ನಲ್ಲಿ ಬಿಜೆಪಿ ಬಲ 23ಕ್ಕೆ ಏರಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬೆಂಜಮಿನ್ ನೆತನ್ಯಾಹು ಮಾಡಿದ ಫೋನ್ ಕರೆಯೇ ಅಮೆರಿಕ-ಇರಾನ್ ಶಾಂತಿ ಮಾತುಕತೆ ಹಳಿತಪ್ಪುವಂತೆ ಮಾಡಿತು'

ಮಹಿಳಾ ಕೋಟಾ ಕಾನೂನು ಸಮಾನತೆಯ ಭಾರತಕ್ಕೆ ಪ್ರಮುಖ: ಪ್ರಧಾನಿ ಮೋದಿ

ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವಿಡಿಯೋ ಕಾಲ್ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್​; ನಾಪತ್ತೆಯಾಗಿದ್ದ ಮಹಿಳೆಯಿಂದ ಸ್ಫೋಟಕ ಹೇಳಿಕೆ

ಕ್ಷೇತ್ರಗಳ ಮರುವಿಂಗಡಣೆ ಪ್ರಸ್ತಾಪ ಅತ್ಯಂತ ಅಪಾಯಕಾರಿ ಹಾಗೂ ಸಂವಿಧಾನದ ಮೇಲಿನ ದಾಳಿ: ಸೋನಿಯಾ ಗಾಂಧಿ

ಹೆಲ್ಮೆಟ್ ಧರಿಸದೆ ಬುಲೆಟ್ ಸವಾರಿ, ಸಂಚಾರ ನಿಯಮ ಉಲ್ಲಂಘನೆ: ನಟಿ ರಚಿತಾ ರಾಮ್ ವಿರುದ್ಧ ಸಾರ್ವಜನಿಕರ ಆಕ್ರೋಶ!

SCROLL FOR NEXT