ದೇಶ

2022ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಎಎಪಿ ಸ್ಪರ್ಧೆ: ಅರವಿಂದ ಕೇಜ್ರಿವಾಲ್

Shilpa D

ನವದೆಹಲಿ: 2022ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಸ್ಪರ್ಧಿಸಲಿದೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಗೋವಾ ಚುನಾವಣೆಯಿಂದ ಪ್ರೇರಿತರಾಗಿರುವ ಅರವಿಂದ್ ಕೇಜ್ರಿವಾಲ್, ದೇಶದ ಅತಿದೊಡ್ಡ ರಾಜ್ಯವಾದ ಉತ್ತರ ಪ್ರದೇಶದಲ್ಲಿ ಆರೋಗ್ಯ ಮತ್ತು ಶಿಕ್ಷಣ ಮೂಲಸೌಕರ್ಯಗಳ ಕಳಪೆ ಸ್ಥಿತಿಯಿಂದಾಗಿ  ಜನರು ದೆಹಲಿಗೆ ಬರುತ್ತಿದ್ದಾರೆ ಎಂದು ಹೇಳಿದ್ದಾರೆ.

ಲಕ್ನೋದಲ್ಲಿ ಮೊಹಲ್ಲಾ ಚಿಕಿತ್ಸಾಲಯಗಳು ಏಕೆ ಇರಬಾರದು? ಎಂದು ಮುಖ್ಯಮಂತ್ರಿಯನ್ನು ಪ್ರಶ್ನಿಸಿದ್ದಾರೆ. ಆಮ್ ಅದ್ಮಿ ಪಾರ್ಟಿ (ಎಎಪಿ) ಮುಂದಿನ ವರ್ಷ ಏಪ್ರಿಲ್‌ನಲ್ಲಿ   ನಡೆಯಲಿರುವ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದು, ಗ್ರಾಮೀಣ ಉತ್ತರಪ್ರದೇಶದಲ್ಲಿ ತನ್ನ ಬೆಂಬಲ ನೆಲೆಯನ್ನು ನಿರ್ಮಿಸುವ ಗುರಿಯನ್ನು ಹೊಂದಿದೆ ಎಂದು ಈ ಹಿಂದೆ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿತ್ತು.

ಕೆಲವು ವರ್ಷಗಳಿಂದ ವಿವಿಧ ಪಕ್ಷಗಳು ಮಾಡಿದ ಅಪ್ರಾಮಾಣಿಕ ಮತ್ತು ಕೊಳಕು ರಾಜಕಾರಣವು ಉತ್ತರಪ್ರದೇಶದಲ್ಲಿ ಯಾವುದೇ ಅಭಿವೃದ್ಧಿಗೆ ಕಾರಣವಾಗಿಲ್ಲ ಎಂದು ಕೇಜ್ರಿವಾಲ್ ಆರೋಪಿಸಿದ್ದಾರೆ. "ಇದು ಕೇವಲ ಪ್ರಾರಂಭ..." ಎಂದು ಅರವಿಂದ್ ಕೇಜ್ರಿವಾಲ್  ಟ್ವಿಟ್ಟರ್ ನಲ್ಲಿ ಬರೆದಿದ್ದಾರೆ.

SCROLL FOR NEXT