ಶಿರೋಮಣಿ ಅಕಾಲಿ ದಳ ಮುಖ್ಯಸ್ಥ ಸುಖ್ಬೀರ್ ಸಿಂಗ್ ಬಾದಲ್ 
ದೇಶ

ಬಿಜೆಪಿ ಸಿಖ್ಖರ ವಿರುದ್ಧ ಹಿಂದೂಗಳನ್ನು ಎತ್ತಿ ಕಟ್ಟುತ್ತಿದೆ, ಕೇಸರಿ ಪಕ್ಷವೇ ನಿಜವಾದ ತುಕ್ಡೆ ತುಕ್ಡೆ ಗ್ಯಾಂಗ್: ಸುಖ್ಬೀರ್ ಬಾದಲ್

ಕೇಂದ್ರ ಸರ್ಕಾರದ ಮೂರು ಕೃಷಿ ಕಾನೂನುಗಳ ವಿರುದ್ಧ ರೈತರ ಪ್ರತಿಭಟನೆಗೆ ಸಂಬಂಧಿಸಿದಂತೆ ಮಂಗಳವಾರ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಎಸ್‌ಎಡಿ ಮುಖ್ಯಸ್ಥ ಸುಖಬೀರ್ ಸಿಂಗ್ ಬಾದಲ್...

ಚಂಡೀಗಢ: ಕೇಂದ್ರ ಸರ್ಕಾರದ ಮೂರು ಕೃಷಿ ಕಾನೂನುಗಳ ವಿರುದ್ಧ ರೈತರ ಪ್ರತಿಭಟನೆಗೆ ಸಂಬಂಧಿಸಿದಂತೆ ಮಂಗಳವಾರ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಎಸ್‌ಎಡಿ ಮುಖ್ಯಸ್ಥ ಸುಖಬೀರ್ ಸಿಂಗ್ ಬಾದಲ್ ಅವರು, ಕೇಸರಿ ಪಕ್ಷವೇ "ನಿಜವಾದ ತುಕ್ಡೆ ತುಕ್ಡೆ ಗ್ಯಾಂಗ್" ಎಂದು ಕರೆದಿದ್ದಾರೆ.

ಬಿಜೆಪಿ ಪಂಜಾಬ್‌ನಲ್ಲಿ ಸಿಖ್ಖರ ವಿರುದ್ಧ ಹಿಂದೂಗಳನ್ನು ಎತ್ತಿ ಕಟ್ಟುತ್ತಿದೆ ಎಂದು ಆರೋಪಿಸಿದ ಶಿರೋಮಣಿ ಅಕಾಲಿ ದಳದ ಅಧ್ಯಕ್ಷ, ಬಿಜೆಪಿ ಮೊದಲು ಮುಸ್ಲಿಮರ ವಿರುದ್ಧ ಹಿಂದೂಗಳನ್ನು ಎತ್ತಿಕಟ್ಟಿತು. ಈಗ ಶಾಂತಿ ಪ್ರಿಯ ಪಂಜಾಬಿ ಹಿಂದೂಗಳನ್ನು ನಮ್ಮ ಸಿಖ್ ಸಹೋದರರ ವಿರುದ್ಧ ಎತ್ತಿಕಟ್ಟಲು ಪ್ರಯತ್ನಿಸುತ್ತಿದೆ. ದೇಶಭಕ್ತ ಪಂಜಾಬ್​ನ್ನು ಬಿಜೆಪಿ ಕೋಮು ಜ್ವಾಲೆಗೆ ತಳ್ಳಲು ಪ್ರಯತ್ನಿಸುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.

ಬಿಜೆಪಿ ನೇತೃತ್ವದ ಸರ್ಕಾರ ತನ್ನ 'ಅಹಂ' ಅನ್ನು ಬದಿಗಿಟ್ಟು ಪ್ರತಿಭಟನೆ ನಡೆಸುತ್ತಿರುವ ರೈತರ ಮಾತುಗಳನ್ನು ಕೇಳಬೇಕು ಎಂದು ಪಂಜಾಬ್ ಮಾಜಿ ಮುಖ್ಯಮಂತ್ರಿ ಒತ್ತಾಯಿಸಿದ್ದಾರೆ.

ಯಾರಾದರು ಕೇಂದ್ರ ಸರ್ಕಾರದ ಪರವಾಗಿ ಮಾತನಾಡಿದರೆ ಅವರನ್ನು 'ದೇಶಭಕ್ತ' ಎಂದು ಕರೆಯಲಾಗುತ್ತದೆ ಮತ್ತು ಸರ್ಕಾರದ ವಿರುದ್ಧ ಮಾತನಾಡಿದರೆ ಅವರನ್ನು "ತುಕ್ಡೆ ತುಕ್ಡೆ ಗ್ಯಾಂಗ್" ಎಂದು ಬ್ರಾಂಡ್ ಮಾಡಲಾಗುತ್ತಿದೆ. ಆದರೆ ಬಿಜೆಪಿಯೇ ದೇಶದ ನಿಜವಾದ ತುಕ್ಡೆ ತುಕ್ಡೆ ಗ್ಯಾಂಗ್ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಬಿಜೆಪಿ ರಾಷ್ಟ್ರೀಯ ಐಕ್ಯತೆಯನ್ನು ಒಡೆಯುತ್ತಿದೆ ಎಂದು ಆರೋಪಿಸಿದ್ದಾರೆ.

ಇದೇ ಕೃಷಿ ಕಾನೂನುಗಳ ವಿಚಾರಕ್ಕೆ ಸಂಬಂಧಿಸಿದಂತೆ ಎಸ್‌ಎಡಿ ಎನ್ ಡಿಎ ಮೈತ್ರಿಕೂಟದಿಂದ ಹೊರ ಬಂದಿದ್ದು, ಮೋದಿ ಸಂಪುಟದಲ್ಲಿ ಸಚಿವೆಯಾಗಿದ್ದ ಎಸ್‌ಎಡಿ ನಾಯಕಿ ಹರ್ಸಿಮ್ರತ್ ಕೌರ್ ಬಾದಲ್ ಅವರು ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel