ಕೋವಿಡ್-19: ಭಾರತದಲ್ಲಿ 1 ಕೋಟಿಯತ್ತ ಸಮೀಪಿಸುತ್ತಿರುವ ಸೋಂಕಿತರ ಸಂಖ್ಯೆ
ಕಳೆದ ಒಂದು ವರ್ಷದಿಂದ ಇಡೀ ವಿಶ್ವವನ್ನು ಬಾಧಿಸುತ್ತಿರುವ ಕೊರೋನಾ ವೈರಸ್ ಪ್ರಕರಣಗಳ ಸಂಖ್ಯೆ ಭಾರತದಲ್ಲಿ 1 ಕೋಟಿಯತ್ತ ಸಮೀಪಿಸುತ್ತಿದೆ.
ನವದೆಹಲಿ: ಕಳೆದ ಒಂದು ವರ್ಷದಿಂದ ಇಡೀ ವಿಶ್ವವನ್ನು ಬಾಧಿಸುತ್ತಿರುವ ಕೊರೋನಾ ವೈರಸ್ ಪ್ರಕರಣಗಳ ಸಂಖ್ಯೆ ಭಾರತದಲ್ಲಿ 1 ಕೋಟಿಯತ್ತ ಸಮೀಪಿಸುತ್ತಿದೆ.
ಮಂಗಳವಾರ ಬೆಳಗಿನ ಅಂಕಿ ಸಂಖ್ಯೆಗಳ ಅನ್ವಯ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 99,06,165ಕ್ಕೆ ಏರಿಕೆಯಾಗಿದೆ.
ಹೀಗಾಗಿ 1-2 ದಿನದಲ್ಲಿ ಕೊರೋನಾ ಪ್ರಕರಣ 1 ಕೋಟಿ ತಲುಪುವ ನಿರೀಕ್ಷೆಗಳಿವೆ. ಇದೇ ವೇಳೆ ಕೊರೋನಾ್ಕೆ 1.43 ಲಕ್ಷ ಮಂದಿ ಬಲಿಯಾಗಿದ್ದಾರೆ.
ಒಟ್ಟಾರೆ ಸೋಂಕಿತರ ಪಟ್ಟಿಯಲ್ಲಿ ಭಾರತದ ವಿಶ್ವ ನಂ.2 ಸ್ಥಾನದಲ್ಲಿದ್ದಾರೆ, ಸಾವಿನ ಸಂಖ್ಯೆಯಲ್ಲಿ ನಂ.3 ಸ್ಥಾನದಲ್ಲಿದೆ. ಇದೇ ವೇಳೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 93.88 ಲಕ್ಷಕ್ಕೆ ಏರಿಕೆಯಾಗಿದ್ದು, ಚೇತರಿಕೆ ಪ್ರಮಾಣ ಶೇ.94.98ಕ್ಕೆ ಏರಿಕೆಯಾಗಿದೆ. 30ರಂದು ಕೇರಳದಲ್ಲಿ ಮೊದಲ ಕೇಸ್ ದಾಖಲಾಗಿತ್ತು. ಅದೇ ರೀತಿ ಮಾ.13ರಂದು ಕರ್ನಾಟಕದ ಕಲಬುರಗಿಯಲ್ಲಿ ಕೊರೋನಾಕ್ಕೆ ಮೊದಲ ಬಲಿ ಸಂಭವಿಸಿತ್ತು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.