ಕೊರೋನಾ ಎಫೆಕ್ಟ್: ಸಂಸತ್ತಿನ ಚಳಿಗಾಲದ ಅಧಿವೇಶನ ರದ್ದು
ಎರಡನೇ ಹಂತದ ಕೊರೋನಾ ಅಲೆಯನ್ನು ನಿಯಂತ್ರಿಸುವ ಹಿನ್ನೆಲೆಯಲ್ಲಿ ಈ ಬಾರಿಯ ಸಂಸತ್ತಿನ ಚಳಿಗಾಲದ ಅಧಿವೇಶನ ರದ್ಧು ಪಡಿಸಲಾಗಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ
ನವದೆಹಲಿ: ಎರಡನೇ ಹಂತದ ಕೊರೋನಾ ಅಲೆಯನ್ನು ನಿಯಂತ್ರಿಸುವ ಹಿನ್ನೆಲೆಯಲ್ಲಿ ಈ ಬಾರಿಯ ಸಂಸತ್ತಿನ ಚಳಿಗಾಲದ ಅಧಿವೇಶನ ರದ್ಧು ಪಡಿಸಲಾಗಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಗಡಿಭಾಗದಲ್ಲಿ ಸಾವಿರಾರು ರೈತರು ವಿವಾದಿತ ಕೃಷಿ ಮಸೂದೆಯನ್ನು ರದ್ದುಪಡಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದು. ಈ ಸಂಬಂಧ ಚರ್ಚಿಸಲು ಅಧಿವೇಶನ ನಡೆಸಬೇಕೆಂದು ಕಾಂಗ್ರೆಸ್ ನ ಅಧೀರ್ ರಂಜನ್ ಚೌಧರಿ ಪತ್ರಕ್ಕೆ ಜೋಶಿ ಉತ್ತರ ನೀಡಿದ್ದಾರೆ. ಜೊತೆಗೆ ಜನವರಿಯಲ್ಲಿ ಬಜೆಟ್ ಕಲಾಪ ನಡೆಯಲಿದೆ ಎಂದು ತಿಳಿಸಿದ್ದಾರೆ.
ಎಲ್ಲಾ ಪಕ್ಷಗಳ ಮುಖಂಡರ ಜೊತೆಗೆ ಚರ್ಚೆ ನಡೆಸಿದ್ದು, ಕೊರೋನಾ ಹಿನ್ನೆಲೆಯಲ್ಲಿ ಅಧಿವೇಶನ ನಡೆಸಬಾರದೆಂಬ ತೀರ್ಮಾನಕ್ಕೆ ಒಮ್ಮತದ ಅಭಿಪ್ರಾಯ ವ್ಯಕ್ತವಾಗಿರುವುದಾಗಿ ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.