ಅಪಘಾತ ನಡೆದ ಸ್ಥಳ 
ದೇಶ

ಉತ್ತರ ಪ್ರದೇಶದಲ್ಲಿ ರಸ್ತೆ ಅಪಘಾತ: ಬಸ್-ಟ್ಯಾಂಕರ್ ಡಿಕ್ಕಿ, 8 ಮಂದಿ ಸಾವು, 25ಕ್ಕೂ ಹೆಚ್ಚು ಜನರಿಗೆ ಗಾಯ

ಉತ್ತರ ಪ್ರದೇಶದ ಸಂಭಾಲ್'ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬಸ್ ಹಾಗೂ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ 8 ಮಂದಿ ಸ್ಥಳದಲ್ಲೇ ದುರ್ಮರಣವನ್ನಪ್ಪಿ, 25ಕ್ಕೂ ಹೆಚ್ಚು ಜನರಿಗೆ ಗಾಯವಾಗಿರುವ ಘಟನೆ ಬುಧವಾರ ನಡೆದಿದೆ. 

ಸಂಭಾಲ್: ಉತ್ತರ ಪ್ರದೇಶದ ಸಂಭಾಲ್'ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬಸ್ ಹಾಗೂ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ 8 ಮಂದಿ ಸ್ಥಳದಲ್ಲೇ ದುರ್ಮರಣವನ್ನಪ್ಪಿ, 25ಕ್ಕೂ ಹೆಚ್ಚು ಜನರಿಗೆ ಗಾಯವಾಗಿರುವ ಘಟನೆ ಬುಧವಾರ ನಡೆದಿದೆ. 

ಇಂದು ಬೆಳಗಿನ ಜಾವ ದುರ್ಘಟನೆ ಸಂಭವಿಸಿದೆ. ಧಾನರಿ ಪ್ರದೇಶದಲ್ಲಿ ಗಟ್ಟ ಮಂಜಿನ ವಾತಾವರಣವಿದ್ದ ಕಾರಣ ಬಸ್ ಹಾಗೂ ಟ್ಯಾಂಕರ್ ನಡುವೆ ಡಿಕ್ಕಿ ಸಂಭವಿಸಿದೆ ಎಂದು ಸಂಭಾಲ್ ಜಿಲ್ಲೆಯ ಎಸ್'ಪಿ ಚಕ್ರೇಶ್ ಮಿಶ್ರಾ ಅವರು ಹೇಳಿದ್ದಾರೆ. 

ಅಪಘಾತ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಭೇಟಿ ನೀಡಲಾಯಿತು. ಈ ವೇಳೆ ಗಾಯಾಳುಗಳನ್ನು ಕೂಡಲೇ ರಕ್ಷಣೆ ಮಾಡಿ ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಯಿತು ಎಂದು ತಿಳಿಸಿದ್ದಾರೆ. 

ಘಟನೆಗೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ತೀವ್ರ ಸಂತಾಪ ಸೂಚಿಸಿದ್ದು, ಗಾಯಾಳುಗಳಿಗೆ ಅಗತ್ಯ ನೆರವು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!

ಸರ್ಕಾರವನ್ನು ಅಸ್ಥಿರಗೊಳಿಸುವ ಪಿತೂರಿ: 'ಸ್ಟಿಂಗ್ ಆಪರೇಷನ್' ಕುರಿತು ಸಿಎಂ DKS ಎಚ್ಚರಿಕೆ ಕರೆಗೆ ಸಚಿವರಿಂದ ಬೆಂಬಲ