ಕೋವಿಡ್ ರೋಗ ನಿರೋಧಕ ಶಕ್ತಿ ವೃದ್ಧಿಸುವ ಔಷಧಿಗಳು 
ದೇಶ

ರೋಗನಿರೋಧಕ ಶಕ್ತಿ ವೃದ್ಧಿಸುವ ಔಷಧಿಯ ಜಾಹೀರಾತು ನೀಡುವಂತಿಲ್ಲ; ಆಯುಷ್‌ ವೈದ್ಯರಿಗೆ ಸುಪ್ರೀಂ ಕೋರ್ಟ್‌ ಸೂಚನೆ

ಆಯುಷ್ ಮತ್ತು ಹೋಮಿಯೋಪಥಿ ವೈದ್ಯರು ಕೋವಿಡ್-19 ಚಿಕಿತ್ಸೆಗಾಗಿ ಸರ್ಕಾರದಿಂದ ಅನುಮೋದಿತ ಮಾತ್ರೆಗಳು ಅಥವಾ ಮಿಶ್ರಣಗಳನ್ನು ರೋಗನಿರೋಧಕ ವರ್ಧಕಗಳಾಗಿ ಸೂಚಿಸಬಹುದು. ಆದರೆ, ಸಾಂಕ್ರಾಮಿಕ ರೋಗಕ್ಕೆ ಪರಿಹಾರ ಎಂದು ಅವುಗಳ ಪ್ರಚಾರ ಮಾಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.

ನವದೆಹಲಿ: ಆಯುಷ್ ಮತ್ತು ಹೋಮಿಯೋಪಥಿ ವೈದ್ಯರು ಕೋವಿಡ್-19 ಚಿಕಿತ್ಸೆಗಾಗಿ ಸರ್ಕಾರದಿಂದ ಅನುಮೋದಿತ ಮಾತ್ರೆಗಳು ಅಥವಾ ಮಿಶ್ರಣಗಳನ್ನು ರೋಗನಿರೋಧಕ ವರ್ಧಕಗಳಾಗಿ ಸೂಚಿಸಬಹುದು. ಆದರೆ, ಸಾಂಕ್ರಾಮಿಕ ರೋಗಕ್ಕೆ ಪರಿಹಾರ ಎಂದು ಅವುಗಳ ಪ್ರಚಾರ ಮಾಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.

ಆಯುಷ್‌ ವೈದ್ಯರು ಕೋವಿಡ್‌ಗೆ ಔಷಧಿಗಳನ್ನು ನೀಡುವುದನ್ನು ನಿರ್ಬಂಧಿಸಿ ಕೇರಳ ಹೈಕೋರ್ಟ್‌ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಡಾ.ಎಕೆಬಿ ಸದ್ಭಾವನ ಮಿಷನ್‌ ಸ್ಕೂಲ್‌ ಆಫ್‌ ಹೋಮಿಯೋ ಫಾರ್ಮಸಿ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್,  ಸುಭಾಷ್ ರೆಡ್ಡಿ ಮತ್ತು ಎಂ.ಆರ್. ಶಾ ಅವರ ಪೀಠ ಈ ಆದೇಶ ನೀಡಿದೆ.

ಈ ಔಷಧಿಗಳ ಬದಲಿಗೆ ರೋಗನಿರೋಧಕ ಶಕ್ತಿ ಹೆಚ್ಚಿಸಲು ಪರ್ಯಾಯ ಔಷಧಿ ಬಳಸುವಂತೆ ಹೈಕೋರ್ಟ್‌ ಆದೇಶ ನೀಡಿತ್ತು. ಕೋವಿಡ್ ಅಪಾಯವನ್ನು ಕಡಿಮೆ ಮಾಡಲು ಹೋಮಿಯೋಪತಿ, ಆಯುರ್ವೇದ, ಸಿದ್ಧ, ಯುನಾನಿ ಮತ್ತು ಪ್ರಕೃತಿಚಿಕಿತ್ಸೆಯನ್ನು ರೋಗ ನಿರೋಧಕ ಶಕ್ತಿಯನ್ನು  ಹೆಚ್ಚಿಸಲು ಬಳಸಬಹುದು ಎಂದೂ ಸುಪ್ರೀಂ ಕೋರ್ಟ್ ಹೇಳಿದೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

'ನಾನು ಕ್ಯಾಬ್‌ನಲ್ಲಿ ಓಡಾಡೋ ಹುಡುಗಿ ಕಣ್ರೋ.. ಹೋಗ್ಲಿ ಪಾಪ ಅಂತಾ ಬಸ್`ನಲ್ಲಿ ಬಂದೆ': MTC ಬಸ್‌ನಲ್ಲಿ ಕುಡಿದ ಮತ್ತಿನಲ್ಲಿ ಯುವತಿ ರಂಪಾಟ, Video ವೈರಲ್

ಅಮೆರಿಕ ಸೇನೆಯ ಮಾಜಿ ಮೇಜರ್‌ಗೆ ಶೂಟ್ ಮಾಡುವ ಮೂಲಕ ಮರಣದಂಡನೆ ಶಿಕ್ಷೆ: 65 ವರ್ಷಗಳಲ್ಲಿ ಇದೇ ಮೊದಲು!

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!