ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ದೇಶದಲ್ಲಿ ಕೊರೋನಾ ಅಬ್ಬರ ಇಳಿಕೆ: ಭಾರತದಲ್ಲಿಂದು 26,382 ಕೇಸ್ ಪತ್ತೆ

ಜನವರಿ-ಫೆಬ್ರವರಿ ತಿಂಗಳಿನಲ್ಲಿ ಕೊರೋನಾ 2ನೇ ಅಲೆ ಕಾಣಿಸಿಕೊಳ್ಳಬಹುದು ಎಂಬ ವಿಶ್ಲೇಷಣೆಗಳ ನಡುವೆಯೇ, ದೇಶದಲ್ಲಿ ವೈರಸ್ ಸೋಂಕಿತರ ಸಂಖ್ಯೆ ದಿನ ಕಳೆದಂತೆ ಇಳಿಯುತ್ತಿರುವುದು ಕಂಡು ಬರುತ್ತಿವೆ.

ಸಂಗ್ರಹ ಚಿತ್ರ
Manjula VN
Updated On : 16 Dec 2020, 1:25 pm

ನವದೆಹಲಿ: ಜನವರಿ-ಫೆಬ್ರವರಿ ತಿಂಗಳಿನಲ್ಲಿ ಕೊರೋನಾ 2ನೇ ಅಲೆ ಕಾಣಿಸಿಕೊಳ್ಳಬಹುದು ಎಂಬ ವಿಶ್ಲೇಷಣೆಗಳ ನಡುವೆಯೇ, ದೇಶದಲ್ಲಿ ವೈರಸ್ ಸೋಂಕಿತರ ಸಂಖ್ಯೆ ದಿನ ಕಳೆದಂತೆ ಇಳಿಯುತ್ತಿರುವುದು ಕಂಡು ಬರುತ್ತಿವೆ. ಭಾರತದಲ್ಲಿ ಬುಧವಾರ ಬೆಳಿಗ್ಗೆ 8 ರವರೆಗಿನ 24 ತಾಸುಗಳ ಅವಧಿಯಲ್ಲಿ 26,382  ಮಂದಿಗೆ ಹೊಸದಾಗಿ ಸೋಂಕು ಕಾಣಿಸಿಕೊಂಡಿದೆ. 

ಒಂದೇ ದಿನ 387 ಮಂದಿ ಸಾವನ್ನಪ್ಪಿದ್ದು, ಸೋಂಕಿನಿಂದ ಈ ವರೆಗೂ ಮರಣವನ್ನಪ್ಪಿದವರ ಸಂಖ್ಯೆ 1,44,096ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 99,32,548ಕ್ಕೆ ಏರಿಕೆಯಾಗಿದ್ದು, ಇನ್ನು ಕೆಲವೇ ದಿನಗಳಲ್ಲಿ ಸೋಂಕಿತರ ಸಂಖ್ಯೆ 1 ಕೋಟಿ ಗಡಿ ದಾಟಲಿದೆ ಎಂದು ಹೇಳಲಾಗುತ್ತಿದೆ. 

Advertisement

Advertisement

ದೇಶದಲ್ಲಿ ಪತ್ತೆಯಾಗಿರುವ ಒಟ್ಟಾರೆ 99,32,548 ಮಂದಿ ಸೋಂಕಿತರ ಪೈಕಿ ನಿನ್ನೆ ಒಂದೇ ದಿನ 33,813 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಈ ವರೆಗೂ ಚೇತರಿಸಿಕೊಂಡವರ ಸಂಖ್ಯೆ 94,56,449ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಪ್ರಸ್ತುತ 3,32,002 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದುಬಂದಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement