ದೇಶ

ದೆಹಲಿ: ಅಧಿವೇಶನದಲ್ಲಿ ಕೇಂದ್ರದ ವಿವಾದಿತ ಕೃಷಿ ಕಾನೂನಿನ ಪ್ರತಿ ಹರಿದು ಹಾಕಿದ ಕೇಜ್ರಿವಾಲ್​​

Lingaraj Badiger

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ ಅವರು ಗುರುವಾರ ವಿಧಾನಸಭೆ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಇತ್ತೀಚಿಗೆ ಜಾರಿಗೆ ತಂದ ಮೂರು ವಿವಾದಾತ್ಮಕ ಕೃಷಿ ಕಾನೂನಿನ ಪ್ರತಿಗಳನ್ನು ಹರಿದು ಹಾಕುವ ಮೂಲಕ ಮೋದಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಷ್ಟ್ರ ರಾಜಧಾನಿ ದೆಹಲಿಯ ಗಡಿಯಲ್ಲಿ ಕೇಂದ್ರದ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಕುರಿತು ಚರ್ಚಿಸಲು ಕರೆಯಲಾಗಿದ್ದ ವಿಶೇಷ ವಿಧಾನಸಭಾ ಅಧಿವೇಶನದಲ್ಲಿ ಮಾತನಾಡಿದ ಸಿಎಂ ಕೇಜ್ರಿವಾಲ್, ಈ ಪ್ರತಿಗಳನ್ನು ಹರಿಯಲು ನೋವಾಗುತ್ತದೆ. ಆದರೆ ಕೊರೆಯುವ ಚಳಿಯಲ್ಲಿ ಬೀದಿಗಳಲ್ಲಿ ಮಲಗಿದ್ದ ನನ್ನ ದೇಶದ ರೈತರಿಗೆ ನಾನು ದ್ರೋಹ ಮಾಡಲು ಸಾಧ್ಯವಿಲ್ಲ. ತಾಪಮಾನ ಕೇವಲ 2 ಡಿಗ್ರಿ ಸೆಲ್ಸಿಯಸ್ ಆಗಿದ್ದರೂ ರೈತರು ಕಳೆದ 22 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದರು.

ನೀವು ದೇಶದ ರೈತರಿಗೆ ದ್ರೋಹ ಮಾಡಲು ಸಾಧ್ಯವಿಲ್ಲ ಎಂದು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು.

ಕೋವಿಡ್​ ಸಾಂಕ್ರಾಮಿಕ ಸಮಯದಲ್ಲಿ ಕೃಷಿ ಕಾನೂನನ್ನು ಜಾರಿಗೆ ತರುವ ಅವಸರ ಏನಿತ್ತು? ಎಂದು ಕೇಂದ್ರವನ್ನು ಪ್ರಶ್ನಿಸಿದ ಕೇಜ್ರಿವಾಲ್, ಬ್ರಿಟಿಷರಿಗಿಂತ ಕೆಟ್ಟವರಾಗಬೇಡಿ ಎಂದು ಎಚ್ಚರಿಸಿದ್ದಾರೆ. 

ಪ್ರತಿಭಟನೆ ನಡೆಸುತ್ತಿರುವ ಪ್ರತಿಯೊಬ್ಬ ರೈತ ಭಗತ್​ಸಿಂಗ್​ ಆಗಿದ್ದಾನೆ. ಕೇಂದ್ರ ನಾವು ರೈತರ ಪರವಾಗಿದ್ದೇವೆ. ಅವರಿಗೆ ಮಸೂದೆಯ ಲಾಭವನ್ನು ತಿಳಿಸಲು ಪ್ರಯತ್ನಿಸುತ್ತೇವೆ ಎಂದು ಸರ್ಕಾರ ಹೇಳುತ್ತಿದೆ. ರೈತರಿಂದ ನಿಮ್ಮ ಭೂಮಿಯನ್ನು ಕಸಿದುಕೊಳ್ಳುವುದಿಲ್ಲ. ಇದೇ ನಿಮಗೆ ಲಾಭಾ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಹೇಳುತ್ತಾರೆ. ಇದೇನಾ ಪ್ರಯೋಜನಾ ಎಂದರೆ ಎಂದು ದೆಹಲಿ ಸಿಎಂ ಪ್ರಶ್ನಿಸಿದರು.

SCROLL FOR NEXT