ದೇಶ

ಖಾಸಗಿ ಮುದ್ರಣಾಲಯದಲ್ಲಿ ಮತದಾರರ ಪಟ್ಟಿ ಮುದ್ರಿಸದಂತೆ ಚುನಾವಣಾ ಆಯೋಗಕ್ಕೆ ಡಿಕೆಶಿ ಪತ್ರ

Lingaraj Badiger

ಬೆಂಗಳೂರು: ಮತದಾರರ ಪಟ್ಟಿಯನ್ನು ಸರ್ಕಾರಿ ಮುದ್ರಣಾಲಯಗಳಲ್ಲಿಯೇ ಮುದ್ರಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ಪತ್ರ ಬರೆದಿದ್ದಾರೆ.

ಚುನಾವಣಾ ಸಂದರ್ಭದಲ್ಲಿ ಕೆಲವು ವರ್ಗಗಳ ಮತದಾರರ ಹೆಸರು ಮತದಾರರ ಪಟ್ಟಿಯಿಂದ ಬಿಟ್ಟು ಹೋಗುವ ಘಟನೆಗಳು ನಡೆಯುತ್ತವೆ. ರಾಜಕೀಯ ಪಕ್ಷದ ಅಂಗ ಸಂಸ್ಥೆಗಳಿಂದ ಮುದ್ರಣ ಮಾಡಿಸುವುದರಿಂದ ಈ ರೀತಿಯ ಘಟನೆಗಳು ನಡೆಯುತ್ತವೆ. ಕೊನೆ ಗಳಿಗೆಯಲ್ಲಿ ಆಗುವ ಪ್ರಮಾದವನ್ನು ಸರಿ ಪಡಿಸಲು ಬೇರೆ ರಾಜಕೀಯ ಪಕ್ಷಗಳಿಗೆ ಅವಕಾಶ ಸಿಗುವುದಿಲ್ಲ. ಅಷ್ಟರಲ್ಲಿ ಚುನಾವಣೆ ಮುಗಿದು ಹೋಗುತ್ತದೆ ಎಂದಿದ್ದಾರೆ.

ಖಾಸಗಿ ಮುದ್ರಣಾಲಯಗಳಲ್ಲಿ ಮುದ್ರಿಸುವುದರಿಂದ ಇಂತಹ ಪ್ರಮಾದಗಳಿಗೆ ಅವಕಾಶ ಕಲ್ಪಿಸಿದಂತಾಗುತ್ತದೆ. ಪಾರದರ್ಶಕತೆ ಇರುವುದಿಲ್ಲ. ತಪ್ಪಿತಸ್ಥರ ವಿರುದ್ಧ ಶಿಸ್ತು ಕ್ರಮ ಹಾಗೂ ಕಾನೂನು ಕ್ರಮ ಕೈಗೊಳ್ಳಲು ಅವಕಾಶ ಇರುವುದಿಲ್ಲ. ಹೀಗಾಗಿ ಮತದಾರರ ಪಟ್ಟಿಯನ್ನು ತಯಾರಿಸಲು ಖಾಸಗಿ ಸಂಸ್ಥೆಗಳಿಗೆ ನೀಡದೆ ಸರ್ಕಾರಿ ಮುದ್ರಣಾಲಯದಲ್ಲಿಯೇ ಮುದ್ರಿಸುವಂತೆ ಡಿಕೆಶಿ ಮನವಿ ಮಾಡಿದ್ದಾರೆ.

ಇನ್ನೇನು ಕೆಲವೇ ದಿನಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆ ನಡೆಯುತ್ತಿದ್ದು, ಪಂಚಾಯತ್ ಮಟ್ಟದಲ್ಲಿ ಎಲ್ಲಾ ತಯಾರಿಗಳು ನಡೆಯುತ್ತಿವೆ. ಹಾಗಾಗಿ ಮತದರಾರ ಪಟ್ಟಿ ಮುದ್ರಣಕ್ಕೆ ಖಾಸಗಿ ಸಂಸ್ಥೆಗಳಿಗೆ ನೀಡಿದರೆ ಅಲ್ಲಿ ಅವ್ಯವಹಾರ ನಡೆಯುವ ಸಾಧ್ಯತೆ ಇದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

SCROLL FOR NEXT