ಸೇನೆ ವಶಕ್ಕೆ ಪಡೆದ ಪಿಸ್ತೂಲ್ 
ದೇಶ

ಭಾರತದ ಗಡಿಯೊಳಗೆ ನುಸುಳಲು ಯತ್ನಿಸಿದ ಇಬ್ಬರು ಶಂಕಿತ ಉಗ್ರರ ಹೊಡೆದುರುಳಿಸಿದ ಸೇನೆ!

ಭಾರತದ ಗಡಿಯೊಳಗೆ ನುಸುಳಲು ಯತ್ನಿಸಿದ ಇಬ್ಬರು ಶಂಕಿತ ಉಗ್ರರನ್ನು ಭಾರತೀಯ ಸೇನೆ ಗುರುವಾರ ಹೊಡೆದುರುಳಿಸಿದೆ.

ಅಮೃತಸರ್: ಭಾರತದ ಗಡಿಯೊಳಗೆ ನುಸುಳಲು ಯತ್ನಿಸಿದ ಇಬ್ಬರು ಶಂಕಿತ ಉಗ್ರರನ್ನು ಭಾರತೀಯ ಸೇನೆ ಗುರುವಾರ ಹೊಡೆದುರುಳಿಸಿದೆ.

ಗಡಿ ಭದ್ರತಾ ಪಡೆಯ (ಬಿಎಸ್‌ಎಫ್) ಯೋಧರು ಗುರುವಾರ ಮುಂಜಾನೆ ಪಂಜಾಬ್‌ನ ಭಾರತ-ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿ ಭಾಗದಲ್ಲಿ ಇಬ್ಬರು ಪಾಕಿಸ್ತಾನ ಮೂಲದ ಭಯೋತ್ಪಾದಕರನ್ನು ಗುಂಡಿಕ್ಕಿ ಕೊಂದಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ. ಇಂದು ಮುಂಜಾನೆ 2.30 ರ ಸುಮಾರಿಗೆ ಅಟಾರಿಯ  ಮುಂಭಾಗದಲ್ಲಿ ಶಸ್ತ್ರಸಜ್ಜಿತವಾಗಿ ಒಳನುಸುಳುತ್ತಿದ್ದ ಭಯೋತ್ಪಾದಕರನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ಘಟನೆ ನಡೆದ ಸ್ಥಳದಲ್ಲಿ ಸೈನಿಕರು ಶೋಧ ಕಾರ್ಯಾಚರಣೆ ನಡೆಸಿದ್ದಾರೆ. 

ಘಟನೆಗೆ ಸಂಬಂಧಿಸಿದಂತೆ ಶೋಧ ನಡೆಸಿದ ಯೋಧರು ಘಟನಾ ಸ್ಥಳದಲ್ಲಿ ಒಂದು ಎಕೆ 56 ರೈಫಲ್, 61 ಸುತ್ತಿನ ಸಡೀವ ಗುಂಡುಗಳ 2 ಮ್ಯಾಗಜಿನ್, ಒಂದು ಮ್ಯಾಗ್ನಮ್ ರೈಫಲ್ ಮತ್ತು 29 ಸುತ್ತಿನ ಗುಂಡುಗಳು, ಒಂದು ಪಿಸ್ತೂಲ್ ಮತ್ತು ಎರಡು ಮ್ಯಾಗಜಿನ್ ಗಳು, 2 ಪಿವಿಸಿ ಪೈಪ್ ಗಳು, ಪಾಕಿಸ್ತಾನದ 30  ರೂಗಳ ನೋಟುಗಳನ್ನು ಸೇನೆ ವಶಕ್ಕೆ ಪಡೆದಿದೆ.

ಪ್ರಸ್ತುತ ಘಟನಾ ಪ್ರದೇಶದಲ್ಲಿ ತೀವ್ರ ಶೋಧ ನಡೆಸಲಾಗುತ್ತಿದೆ. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ