ದೇಶ

ರಾಜ್ಯಗಳ ಹಕ್ಕುಗಳ ಮೇಲೆ ಕೇಂದ್ರದ ಅತಿಕ್ರಮಣ: ಪ.ಬಂಗಾಳದ ಮೂವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಕುರಿತು ಕೇಜ್ರಿವಾಲ್ ಟೀಕೆ

Nagaraja AB

ನವದೆಹಲಿ: ಪಶ್ಚಿಮ ಬಂಗಾಳ ಆಡಳಿತದಲ್ಲಿ ಕೇಂದ್ರ ಸರ್ಕಾರ ಸ್ಪಷ್ಟವಾಗಿ ಹಸ್ತಕ್ಷೇಪ ಮಾಡಿದೆ ಎಂದು ಆರೋಪಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಅಲ್ಲಿಂದ ಮೂವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಕ್ರಮ ಸಂಯುಕ್ತ ವ್ಯವಸ್ಥೆ ಮೇಲಿನ ಅಕ್ರಮಣವಾಗಿದೆ ಎಂದಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಇತ್ತೀಚಿಗೆ ಪಶ್ಟಿಮ ಬಂಗಾಳ ಭೇಟಿ ಸಂದರ್ಭದಲ್ಲಿ ಭದ್ರತಾ ವೈಫಲ್ಯ ಆರೋಪ ಎದುರಿಸುತ್ತಿರುವ ಮೂವರು ಐಪಿಎಸ್ ಅಧಿಕಾರಿಗಳನ್ನು ಕೇಂದ್ರ ಸೇವೆ ನಿಯೋಜನೆಗೆ ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರ ತೀವ್ರ ವಿರೋಧ ವ್ಯಕ್ತಪಡಿಸಿದೆ.

ಪಶ್ಚಿಮ ಬಂಗಾಳ ಆಡಳಿತದಲ್ಲಿ ಕೇಂದ್ರ ಸರ್ಕಾರ ಮೂಗು ತೂರಿಸುವುದನ್ನು ಖಂಡಿಸುತ್ತೇನೆ. ವಿಧಾನಸಭಾ ಚುನಾವಣೆ ಸಮೀಪದಲ್ಲಿರುವಂತೆಯೇ ಮೂವರು ಐಪಿಎಸ್ ಅಧಿಕಾರಿಗಳನ್ನು ಕೇಂದ್ರ ಸೇವೆಗೆ ನಿಯೋಜನೆಯ ಪ್ರಯತ್ನ ರಾಜ್ಯಗಳ ಹಕ್ಕುಗಳ ಮೇಲಿನ ಅತಿಕ್ರಮಣವಾಗಿದೆ. ಒಕ್ಕೂಟ ವ್ಯವಸ್ಥೆ ಮೇಲಿನ ಹಲ್ಲೆಯಾಗಿದ್ದು, ಅದನ್ನು ಅಸ್ಥಿರಗೊಳಿಸುವ ಪ್ರಯತ್ನವಾಗಿದೆ ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

ಮುಂದಿನ ವರ್ಷ ನಿಗದಿಯಾಗಿರುವ ಪಶ್ಚಿಮ ಬಂಗಾಳ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆಗಾಗಿ ಭೇಟಿ ನೀಡಿದ್ದ ಟಿಎಂಸಿ ಕಾರ್ಯಕರ್ತರು ದಾಳಿ ಮಾಡಿದ್ದ ಜೆ ಪಿ ನಡ್ಡಾ ಅವರ ಬೆಂಗಾವಲು ಪಡೆಗೆ ಭದ್ರತೆ ಒದಗಿಸಲು ಮೂವರು ಐಪಿಎಸ್ ಅಧಿಕಾರಿಗಳಿಗೆ ಹೊಣೆಗಾರಿಕೆ ವಹಿಸಲಾಗಿತ್ತು. ಆದರೆ, ಭದ್ರತಾ ವೈಫಲ್ಯ ಆರೋಪದ ಮೇರೆಗೆ ಈ ಪೊಲೀಸ್ ಅಧಿಕಾರಿಗಳನ್ನು ಕೇಂದ್ರ ಸೇವೆಗೆ ನಿಯೋಜನೆಗೆ ಕೇಂದ್ರ ಸರ್ಕಾರ ಬಯಸಿದೆ.

ವಿಧಾನಸಭಾ ಚುನಾವಣೆ ಸಮೀಪದಲ್ಲಿರುವಂತೆಯೇ, ಕೇಂದ್ರ ಸರ್ಕಾರದ ಈ ನಡೆ ವಿರುದ್ಧ ವಾಗ್ದಾಳಿ ನಡೆಸಿರುವ ಮಮತಾ ಬ್ಯಾನರ್ಜಿ, ಇದು ಅಸಂವಿಧಾನಿಕ ಮತ್ತು ಸಂಪೂರ್ಣವಾಗಿ ಸ್ವೀಕರಿಸಲಾಗದು ಎಂದಿದ್ದಾರೆ. 

SCROLL FOR NEXT