ದೇಶ

ಟಿಎಂಸಿ ಬಂಡಾಯ ಮುಖಂಡ ಸುವೇಂದು ಅಧಿಕಾರಿಗೆ ಕೇಂದ್ರದಿಂದ ಝಡ್ ಶ್ರೇಣಿ ಭದ್ರತೆ!

Nagaraja AB

ನವದೆಹಲಿ: ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ಬಂಡಾಯ ಮುಖಂಡ ಸುವೇಂದು ಅಧಿಕಾರಿಗೆ ಝಡ್ ಶ್ರೇಣಿಯ ಭದ್ರತೆ ನೀಡಲು ಕೇಂದ್ರ ಗೃಹ ಸಚಿವಾಲಯ ನಿರ್ಧರಿಸಿದೆ.

ಕೇಂದ್ರ ಗೃಹ ಸಚಿವಾಲಯ ಹೊರಡಿಸಿರುವ ಆದೇಶದ ಪ್ರಕಾರ, ಸುವೇಂದು ಅಧಿಕಾರಿಯ ಭದ್ರತಾ ವ್ಯವಸ್ಥೆಯನ್ನು ಕೇಂದ್ರ ಭದ್ರತಾ ಸಂಸ್ಥೆಗಳೊಂದಿಗೆ ಸಮಾಲೋಚಿಸಿ ಪರಿಶೀಲಿಸಲಾಗಿದ್ದು, ಝಡ್ ಶ್ರೇಣಿಯ ಭದ್ರತೆ ನೀಡಲು ನಿರ್ಧರಿಸಲಾಗಿದೆ. ಪಶ್ಚಿಮ ಬಂಗಾಳದಲ್ಲಿ ಗುಂಡು ನಿರೋಧಕ ವಾಹನದೊಂದಿಗೆ ಸಿಆರ್ ಪಿಎಫ್ ಸುತ್ತುವರೆದಿರುವ ಝಡ್ ಶ್ರೇಣಿಯ ಭದ್ರತೆಯನ್ನು, ಇತರ ರಾಜ್ಯಗಳಲ್ಲಿ ವೈ + ಶ್ರೇಣಿಯ ಭದ್ರತೆ ಕಲ್ಪಿಸಲಾಗಿದೆ.

ಅಧಿಕಾರಿ ಇತ್ತೀಚಿಗೆ ತೃಣಮೂಲ ಕಾಂಗ್ರೆಸ್ ಅಧಿನಾಯಕಿ ಮಮತಾ ಬ್ಯಾನರ್ಜಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದರು. ಪಶ್ಚಿಮ ಬಂಗಾಳ ವಿಧಾನಸಭೆಯ ಸದಸ್ಯತ್ವಕ್ಕೂ ಅವರು ರಾಜೀನಾಮೆಯನ್ನು ನೀಡಿದ್ದಾರೆ.

ಪಕ್ಷದ ಸದಸ್ಯನಾಗಿ ಯಾವಾಗಲೂ ಮೌಲ್ಯಗಳೊಂದಿಗೆ ಸೇವೆ ಸಲ್ಲಿಸಿದ್ದು, ಅವಕಾಶ ನೀಡಿದ್ದಕ್ಕೆ ಧನ್ಯವಾದಗಳು ಎಂದು ಮಮತಾ ಬ್ಯಾನರ್ಜಿಗೆ ಸಲ್ಲಿಸಿರುವ ರಾಜೀನಾಮೆ ಪತ್ರದಲ್ಲಿ ಸುವೇಂದು ಅಧಿಕಾರಿ ಬರೆದಿದ್ದಾರೆ.

SCROLL FOR NEXT