ಕಂದಹಾರ್ ನಲ್ಲಿ ಆಫ್ಫನ್ ಪಡೆಗಳಿಂದ 74 ಉಗ್ರರ ಹತ್ಯೆ
ಆಫ್ಘಾನಿಸ್ತಾನದ ಕಂದಾಹರ್ ಪ್ರಾಂತ್ಯದಲ್ಲಿ 74 ತಾಲಿಬಾನ್ ಉಗ್ರರನ್ನು ನಿರ್ನಾಮ ಮಾಡಲಾಗಿದೆ ಎಂದು ಅಲ್ಲಿನ ರಕ್ಷಣಾ ಸಚಿವಾಲಯ ಭಾನುವಾರ ತಿಳಿಸಿದೆ.
ಕಾಬೂಲ್: ಆಫ್ಘಾನಿಸ್ತಾನದ ಕಂದಾಹರ್ ಪ್ರಾಂತ್ಯದಲ್ಲಿ 74 ತಾಲಿಬಾನ್ ಉಗ್ರರನ್ನು ನಿರ್ನಾಮ ಮಾಡಲಾಗಿದೆ ಎಂದು ಅಲ್ಲಿನ ರಕ್ಷಣಾ ಸಚಿವಾಲಯ ಭಾನುವಾರ ತಿಳಿಸಿದೆ.
ಕಂದಹಾರ್ ಪ್ರಾಂತ್ಯದ ಝೆರಿಯಾ, ದಂಡ್, ಪಾಂಜ್ವೆ ಮತ್ತು ಅರ್ಗನ್ದಾಬ್ ಜಿಲ್ಲೆಗಳಲ್ಲಿ ನಡೆದ ದಾಳಿಗಳಲ್ಲಿ ಕನಿಷ್ಠ 74 ಉಗ್ರರು ಹತರಾಗಿದ್ದು ಇತರ 15 ಮಂದಿ ಗಾಯಗೊಂಡಿದ್ದಾರೆ ಎಂದು ಸಚಿವಾಲಯ ಟ್ವಿಟರ್ ಮೂಲಕ ತಿಳಿಸಿದೆ.
ಆಫ್ಘನ್ ರಾಷ್ಟ್ರೀಯ ರಕ್ಷಣಾ ಮತ್ತು ಭದ್ರತಾ ಪಡೆಗಳು ನೆಲೆಗಳ ಮೇಲೆ ದಾಳಿ ಮಾಡಲು ಸಿದ್ಧತೆ ನಡೆಸಿದ್ದ ತಾಲಿಬಾನ್ ಉಗ್ರರನ್ನು ಗುರಿಯಾಗಿಸಿಕೊಂಡು ಆಫ್ಘನ್ ರಾಷ್ಟ್ರೀಯ ಸೇನೆ ನಡೆಸಿದ ಕಾರ್ಯಾಚರಣೆಗಳ ವೇಳೆ ಘರ್ಷಣೆಗಳು ನಡೆದಿವೆ ಎಂದಿರುವ ಸಚಿವಾಲಯ, ಉಗ್ರರ ಬಳಿ ಇದ್ದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನೂ ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.