ಸಾಂದರ್ಭಿಕ ಚಿತ್ರ 
ದೇಶ

ಪಕ್ಷಾಂತರ ಪರ್ವ ಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ: ಪಶ್ಚಿಮ ಬಂಗಾಳ ಸಚಿವ

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಕೇವಲ ಐದು ತಿಂಗಳು ಬಾಕಿ ಇರುವಂತೆಯೇ ಪಕ್ಷಾಂತರ ಪರ್ವ ಆರಂಭವಾಗಿದ್ದು, ಆಡಳಿತರೂಢ ಟಿಎಂಸಿಯ ಹಲವು ನಾಯಕರು ಬಿಜೆಪಿ ಸೇರಿದ್ದಾರೆ.

ಕೋಲ್ಕತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಕೇವಲ ಐದು ತಿಂಗಳು ಬಾಕಿ ಇರುವಂತೆಯೇ ಪಕ್ಷಾಂತರ ಪರ್ವ ಆರಂಭವಾಗಿದ್ದು, ಆಡಳಿತರೂಢ ಟಿಎಂಸಿಯ ಹಲವು ನಾಯಕರು ಬಿಜೆಪಿ ಸೇರಿದ್ದಾರೆ. ಇನ್ನು ಪಕ್ಷಾಂತರಿಗಳ ಬಗ್ಗೆ ಚಿಂತಿಸುವ ಅಗತ್ಯ ಇಲ್ಲ ಎಂದಿರುವ ಪಶ್ಚಿಮ ಬಂಗಾಳ ಸಚಿವ ಸುಬ್ರತ ಮುಖರ್ಜಿ ಅವರು, "ದೇಶದ್ರೋಹಿಗಳು ಮತ್ತು ಬ್ಯಾಕ್‌ಸ್ಟ್ಯಾಬರ್‌ಗಳು ಅನಾದಿ ಕಾಲದಿಂದಲೂ ಅಸ್ತಿತ್ವದಲ್ಲಿದ್ದಾರೆ" ಎಂದಿದ್ದಾರೆ.

ಇಂದು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಪಂಚಾಯತ್ ಸಚಿವ, ಪಕ್ಷಾಂತರದಿಂದ ನಮ್ಮ ಪಕ್ಷ ಆಘಾತಕ್ಕೊಳಗಾಗುವುದಿಲ್ಲ. ಏಕೆಂದರೆ ಇದು ವಿಧಾನಸಭಾ ಚುನಾವಣೆಯ ಮೇಲೆ "ಯಾವುದೇ ಪರಿಣಾಮ ಬೀರುವುದಿಲ್ಲ" ಎಂದು ಹೇಳಿದ್ದಾರೆ.

ಇಂತಹ ಬೆಳವಣಿಗೆಗಳಿಗೆ ಟಿಎಂಸಿ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುವುದಿಲ್ಲ ಮತ್ತು 294 ವಿಧಾನಸಭಾ ಸ್ಥಾನಗಳಲ್ಲಿ 250 ಸ್ಥಾನಗಳನ್ನು ಗೆಲ್ಲುವುದಾಗಿ ಹೇಳಿದ ಬಿಜೆಪಿಯ ಹೇಳಿಕೆ "ಅಸಂಬದ್ಧ" ಎಂದಿದ್ದಾರೆ.

ನಿನ್ನೆ ಮಿಡ್ನಾಪುರದಲ್ಲಿ ಗೃಹ ಸಚಿವ ಅಮಿತ್ ಶಾ ಅವರ ರ್ಯಾಲಿಯ ವೇಳೆ ಟಿಎಂಸಿ ಹಿರಿಯ ನಾಯಕ, ಮಾಜಿ ಸಚಿವ ಸುವೇಂದು ಅಧಿಕಾರಿ, ಟಿಎಂಸಿಯ ಒಬ್ಬ ಸಂಸದ ಮತ್ತು ಐವರು ಶಾಸಕರು ಬಿಜೆಪಿ ಸೇರಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!