ಲಾಲು ಪ್ರಸಾದ್ ಯಾದವ್ ಹಾಗೂ ಪುತ್ರ ತೇಜಸ್ವಿ ಯಾವದ್ (ಸಂಗ್ರಹ ಚಿತ್ರ) 
ದೇಶ

ಬಿಹಾರ ಮಾಜಿ ಸಿಎಂ ಲಾಲು ಪ್ರಸಾದ್ ಆರೋಗ್ಯ ಕ್ಷೀಣ; ಶೇ.25ರಷ್ಟು ಮಾತ್ರ ಕಿಡ್ನಿ ಕಾರ್ಯ ನಿರ್ವಹಣೆ

ಆರ್ ಜೆಡಿ ಮುಖ್ಯಸ್ಥ ಹಾಗೂ ಬಿಹಾರದ ಮಾಜಿ ಸಿಎಂ, ಮಾಜಿ ಕೇಂದ್ರ ಸಚಿವ ಲಾಲು ಪ್ರಸಾದ್ ಯಾದವ್ ಅವರ ಆರೋಗ್ಯ ಮತ್ತಷ್ಟು ಕ್ಷೀಣವಾಗಿದ್ದು, ಅವರ ಕಿಡ್ನಿಯ ಶೇ.25ರಷ್ಟು ಭಾಗ ಮಾತ್ರ ಕಾರ್ಯ ನಿರ್ವಹಿಸುತ್ತಿದೆ ಎಂದು ಹೇಳಲಾಗಿದೆ.

ಪಾಟ್ನಾ: ಆರ್ ಜೆಡಿ ಮುಖ್ಯಸ್ಥ ಹಾಗೂ ಬಿಹಾರದ ಮಾಜಿ ಸಿಎಂ, ಮಾಜಿ ಕೇಂದ್ರ ಸಚಿವ ಲಾಲು ಪ್ರಸಾದ್ ಯಾದವ್ ಅವರ ಆರೋಗ್ಯ ಮತ್ತಷ್ಟು ಕ್ಷೀಣವಾಗಿದ್ದು, ಅವರ ಕಿಡ್ನಿಯ ಶೇ.25ರಷ್ಟು ಭಾಗ ಮಾತ್ರ ಕಾರ್ಯ ನಿರ್ವಹಿಸುತ್ತಿದೆ ಎಂದು ಹೇಳಲಾಗಿದೆ.

ಈ ಬಗ್ಗೆ ಸ್ವತಃ ಲಾಲು ಪ್ರಸಾದ್ ಅವರ ಪುತ್ರ ತೇಜಸ್ವಿ ಯಾದವ್ ಅವರ ಪುತ್ರ ಮಾಹಿತಿ ನೀಡಿದ್ದು, ಬಿಹಾರದ ರಾಜೇಂದ್ರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. 'ಲಾಲು ಪ್ರಸಾದ್ ಯಾದವ್ ಅವರ ಕಿಡ್ನಿಗಳು ಶೇ.25ರಷ್ಟು ಮಾತ್ರ ಕಾರ್ಯ  ನಿರ್ವಹಿಸುತ್ತಿವೆ. ಅವರು ರಾಜೇಂದ್ರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚುನಾವಣೆಯಲ್ಲಿ ಕಾರ್ಯನಿರತನಾಗಿದ್ದ ನಾನು ಕಳೆದ 4-5 ತಿಂಗಳಿನಿಂದ ಅವರನ್ನು ಭೇಟಿ ಮಾಡಿರಲಿಲ್ಲ. ಹೀಗಾಗಿ ಇಂದು ಅವರನ್ನು ಭೇಟಿ ಮಾಡಲು ಬಂದಿದ್ದೇನೆ. ಚುನಾವಣೆ ಬಳಿಕ ಇದೇ  ಮೊದಲ ಬಾರಿಗೆ ಲಾಲು ಪ್ರಸಾದ್ ಯಾದವ್ ಅವರನ್ನು ಭೇಟಿ ಮಾಡುತ್ತಿದ್ದೇನೆ ಎಂದು ಹೇಳಿದರು.

ಇನ್ನು ಪ್ರಸ್ತುತ ಲಾಲು ಪ್ರಸಾದ್ ಯಾದವ್ ಅವರ ಆರೋಗ್ಯ ಸ್ಥಿರವಾಗಿದೆ. ತಂದೆಯವರ ಆರೋಗ್ಯದ ಕುರಿತು ನಾವು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕಾಗಿದೆ.  ರಿಮ್ಸ್ ವೈದ್ಯರೊಂದಿಗೆ ಮಾತ್ರವಲ್ಲದೆ ದೆಹಲಿಯ ಕೆಲವು ಪ್ರಖ್ಯಾತ ವೈದ್ಯರು ಮತ್ತು ನಮ್ಮ ಕುಟುಂಬ ವೈದ್ಯರೊಂದಿಗೆ  ಮಾತನಾಡುತ್ತಿದ್ದೇವೆ. ಮೂತ್ರಪಿಂಡಗಳ ಕಾರ್ಯನಿರ್ವಹಣೆ ಶೇ 25ಕ್ಕೆ ಕುಸಿದಿದೆ. ಇದು ಗಂಭೀರವಾದ ಪರಿಸ್ಥಿತಿ. ಹೀಗಾಗಿ ಲಾಲು ಅವರನ್ನು ಭೇಟಿ ಮಾಡಲು ವೈದ್ಯರೊಂದಿಗೆ ಮನವಿ ಮಾಡಿದ್ದೆವು ಎಂದು ತೇಜಸ್ವಿ ಹೇಳಿದ್ದಾರೆ.

ಇನ್ನು ಬಿಹಾರ ಚುನಾವಣೆಯಲ್ಲಿ ಕೆಲವೇ ಸ್ಥಾನಗಳ ಅಂತರದಲ್ಲಿ ಮಹಾಘಟ್ ಬಂದನ್ ಅಧಿಕಾರದಿಂದ ದೂರ ಉಳಿಯುವಂತಾಗಿತ್ತು. ಈ ಬೆಳವಣಿಗೆ ಬಳಿಕ ಇದೇ ಮೊದಲ ಬಾರಿಗೆ ತೇಜಸ್ವಿ ಯಾದವ್ ಅವರು ಲಾಲು ಪ್ರಸಾದ್ ಅವರನ್ನು ಭೇಟಿ ಮಾಡಿದ್ದಾರೆ. 

ಇತ್ತೀಚೆಗಷ್ಟೇ ಲಾಲು ಪ್ರಸಾದ್ ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರೊಬ್ಬರು ಲಾಲು ಪ್ರಸಾದ್ ಅವರ ಕಿಡ್ನಿಗಳು ಶೇ.25ರಷ್ಟು ಮಾತ್ರ ಕಾರ್ಯನಿರ್ವಹಿಸುತ್ತಿವೆ ಎಂದು ಹೇಳಿದ್ದರು. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!

ಸ್ಟಾರ್‌ಲಿಂಕ್ ವಿವಾದ: ಭಾರತ ವಸಾಹತಲ್ಲ- Elon Musk ಗೆ ಕಮಲ್ ಹಾಸನ್ ತಿರುಗೇಟು

'ರಾಹುಲ್ ಗಾಂಧಿ ಅವರೇ, ನಿಮ್ಮ ಉದ್ದೇಶಗಳು ಎಂದಿಗೂ ಈಡೇರಲ್ಲ': ವಿಪಕ್ಷದವರದ್ದು 'ನಗರ ನಕ್ಸಲ್' ಮನಸ್ಥಿತಿ; ನಿತಿನ್ ನಬಿನ್