ಅಮಿತ್ ಶಾ ರೋಡ್‌ ಶೋ 
ದೇಶ

ಬಾಂಗ್ಲಾದೇಶೀಯರ ಒಳ ನುಸುಳುವಿಕೆ ತಡೆಯಲು ಬಂಗಾಳದ ಜನ ಬದಲಾವಣೆ ಬಯಸಿದ್ದಾರೆ: ಅಮಿತ್ ಶಾ

ರಾಜ್ಯದಲ್ಲಿ ರಾಜಕೀಯ ಹಿಂಸಾಚಾರ, ಭ್ರಷ್ಟಾಚಾರ, ಸುಲಿಗೆ ಮತ್ತು ಬಾಂಗ್ಲಾದೇಶೀಯರ ಒಳ ನುಸುಳುವಿಕೆಯನ್ನು ತಡೆಯಲು ಪಶ್ಚಿಮ ಬಂಗಾಳದ ಜನ ಬದಲಾವಣೆ ಬಯಸಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾನುವಾರ ಹೇಳಿದ್ದಾರೆ.

ಬೋಲ್‌ಪುರ: ರಾಜ್ಯದಲ್ಲಿ ರಾಜಕೀಯ ಹಿಂಸಾಚಾರ, ಭ್ರಷ್ಟಾಚಾರ, ಸುಲಿಗೆ ಮತ್ತು ಬಾಂಗ್ಲಾದೇಶೀಯರ ಒಳ ನುಸುಳುವಿಕೆಯನ್ನು ತಡೆಯಲು ಪಶ್ಚಿಮ ಬಂಗಾಳದ ಜನ ಬದಲಾವಣೆ ಬಯಸಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾನುವಾರ ಹೇಳಿದ್ದಾರೆ.

ಇಂದು ಪಶ್ಚಿಮ ಬಂಗಾಳದ ಬೋಲ್‌ಪುರದಲ್ಲಿ ರೋಡ್‌ ಶೋದಲ್ಲಿ ಮಾತನಾಡಿದ ಅಮಿತ್ ಶಾ ಅವರು ಮಮತಾ ಬ್ಯಾನರ್ಜಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ನಾನು ನನ್ನ ಜೀವನದಲ್ಲಿ ಹಲವಾರು ರೋಡ್ ಶೋಗಳನ್ನು ನಡೆಸಿದ್ದೇನೆ ಮತ್ತು ಆಯೋಜಿಸಿದ್ದೇನೆ. ಆದರೆ ಈ ರೀತಿಯ ರೋಡ್ ಶೋ ಯಾವತ್ತೂ ನೋಡಿಲ್ಲ. ಈ ರೋಡ್ ಶೋ ಮಮತಾ ಬ್ಯಾನರ್ಜಿ ಸರ್ಕಾರದ ವಿರುದ್ಧ ಜನರ ಆಕ್ರೋಶದ ಪ್ರತಿಬಿಂಬವಾಗಿದೆ. ಇಲ್ಲಿ ಸೇರಿರುವ ಜನಸ್ತೋಮವು ನರೇಂದ್ರ ಮೋದಿ ಅವರ ಅಭಿವೃದ್ಧಿ ಅಜೆಂಡಾದ ಮೇಲೆ ಜನರ ನಂಬಿಕೆಯನ್ನು ತೋರಿಸುತ್ತದೆ ಎಂದಿದ್ದಾರೆ.

ಬಂಗಾಳದ ಸಾಂಸ್ಕೃತಿಕ ಮತ್ತು ಸಾಹಿತ್ಯ ಕ್ಷೇತ್ರದ ಮೇರು ವ್ಯಕ್ತಿ ರವೀಂದ್ರನಾಥ ಟ್ಯಾಗೋರ್ ಅವರೊಂದಿಗೆ ನಿಕಟ ಬಾಂಧವ್ಯ ಹೊಂದಿರುವ ಪಟ್ಟಣವಿದು. ಹಿಂದೆ ‘ಸೋನರ್ ಬಾಂಗ್ಲಾ (ಬೆಂಗಾಲ್ ಆಫ್‌ ಗೋಲ್ಡ್)’ ಎಂದು ಕರೆಯುತ್ತಿದ್ದ ಇಲ್ಲಿನ ವೈಭವವನ್ನು ಬಿಜೆಪಿ ಅಧಿಕಾರಕ್ಕೆ ಬಂದರೆ ಮರಳಿ ರೂಪಿಸಲಿದೆ ಎಂದು ಶಾ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!