ಬಾಲಿವುಡ್ ನಟ ದಿಲ್ಜಿತ್ ದೋಸಾಂಜ್ 
ದೇಶ

ಪ್ರತಿಭಟನಾನಿರತ ರೈತರ ಸ್ಥಿತಿಗೆ ಮರುಗಿದ ಬಾಲಿವುಡ್ ನಟ: ಇದಕ್ಕಾಗಿ 1 ಕೋಟಿ ರೂ. ನೆರವು ಘೋಷಣೆ!

ಕೊರೆಯುವ ಚಳಿಯ ನಡುವೆಯೂ ಕೇಂದ್ರದ ನೂತನ ಕೃಷಿ ಕಾನೂನುಗಳನ್ನು ವಿರೋಧಿಸಿ  ರೈತರು ಪ್ರತಿಭಟನೆ ನಡೆಸುತ್ತಿರುವ ಗಾಜಿಪುರ ಗಡಿಯಲ್ಲಿನ ಪ್ರತಿಭಟನಾ ಸ್ಥಳಕ್ಕೆ ಇಂದು ಭೇಟಿ ನೀಡಿದ ಬಾಲಿವುಡ್ ಹಾಗೂ ಪಂಜಾಬ್ ನಟ, ಸಂಗೀತಗಾರ ದಿಲ್ಜಿತ್ ದೋಸಾಂಜ್, ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದರು.

ನವದೆಹಲಿ: ಕೊರೆಯುವ ಚಳಿಯ ನಡುವೆಯೂ ಕೇಂದ್ರದ ನೂತನ ಕೃಷಿ ಕಾನೂನುಗಳನ್ನು ವಿರೋಧಿಸಿ  ರೈತರು ಪ್ರತಿಭಟನೆ ನಡೆಸುತ್ತಿರುವ ಗಾಜಿಪುರ ಗಡಿಯಲ್ಲಿನ ಪ್ರತಿಭಟನಾ ಸ್ಥಳಕ್ಕೆ ಇಂದು ಭೇಟಿ ನೀಡಿದ ಬಾಲಿವುಡ್ ಹಾಗೂ ಪಂಜಾಬ್ ನಟ, ಸಂಗೀತಗಾರ ದಿಲ್ಜಿತ್ ದೋಸಾಂಜ್, ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದರು.

ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ದಿಲ್ಜಿತ್ ದೋಸಾಂಜ್, ಪ್ರತಿಭಟನಾಕಾರರಿಗಾಗಿ ಬೆಚ್ಚನೆಯ ಉಡುಪು ಖರೀದಿಗೆ 1 ಕೋಟಿ ರೂ. ನೆರವು ನೀಡುವುದಾಗಿ ಹೇಳಿದರು.

ಈ ವಾರದ ಆರಂಭದಲ್ಲಿ ರೈತರ ಪ್ರತಿಭಟನೆ ಕುರಿತು ಟ್ವೀಟ್ ಮಾಡಿದ್ದ ಬಾಲಿವುಡ್ ನಟಿ ಕಂಗನಾ ರಣಾವತ್ ಅವರಿಗೆ ದಿಲ್ಜಿತ್ ದೋಸಾಂಜ್ ತಿರುಗೇಟು ನೀಡಿದ್ದರು.

ಸಿಂಗು ಗಡಿಯಲ್ಲಿ ರೈತರನ್ನುದ್ದೇಶಿಸಿ ಮಾತನಾಡಿದ ದೋಸಾಂಜ್, ಹೊಸ ಇತಿಹಾಸ ಸೃಷ್ಟಿಸಿರುವ ಎಲ್ಲಾ ರೈತರಿಗೂ ಹ್ಯಾಟ್ಸ್ ಆಫ್, ಈ ಇತಿಹಾಸವನ್ನು ಮುಂದಿನ ಪೀಳಿಗೆಗೆ ವಿವರಿಸಲಾಗುವುದು. ರೈತರ ಸಮಸ್ಯೆಗಳನ್ನು ಯಾರೂ ಕೂಡಾ ಬೇರೆ ಕಡೆಗೆ ತಿರುಗಿಸಬಾರದು ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್