ಮುಂಬೈ: ಇಂಗ್ಲೆಂಡ್ ನಲ್ಲಿ ಕೊರೋನಾ ಹೊಸ ರೂಪ ತಾಳಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಮಹಾರಾಷ್ಟ್ರ ಸರ್ಕಾರ ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿಗೆ ನಿರ್ಧರಿಸಿದೆ.
ನಾಳೆಯಿಂದ ರಾಜ್ಯದ ಎಲ್ಲ ನಗರಸಭೆ ವ್ಯಾಪ್ತಿಯಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡಿದ್ದು ಜನವರಿ 5ರವರೆಗೆ ನೈಟ್ ಕರ್ಫ್ಯೂ ಘೋಷಣೆ ಮಾಡಿದೆ. ರಾತ್ರಿ 11ರಿಂದ ಬೆಳಗ್ಗೆ 6 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ.
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
ದೇಶದಲ್ಲಿಯೇ ಮಹಾರಾಷ್ಟ್ರದಲ್ಲಿ ಅತೀ ಹೆಚ್ಚು ಕೊರೋನಾ ಪ್ರಕರಣಗಳು ಪತ್ತೆಯಾಗುತ್ತಿದೆ. ಇಂದು 3,811 ಮಂದಿಗೆ ಕೊರೋನಾ ವಕ್ಕರಿಸಿದೆ.