ಹರದೀಪ್ ಸಿಂಗ್ ಪುರಿ 
ದೇಶ

ಹೊಸ ಸ್ವರೂಪದ ಕೊರೋನಾ: ಬ್ರಿಟನ್ ವಿಮಾನಗಳಿಗೆ ಡಿ. 31 ರವರೆಗೆ ನಿಷೇಧ ಹೇರಿದ ಕೇಂದ್ರ

ಬ್ರಿಟನ್ ನಲ್ಲಿ ರೂಪಾಂತರಗೊಂಡ ಮಹಾಮಾರಿ ಕೊರೋನಾ ವೈರಸ್ ನ ಹೊಸ ಪ್ರಭೇದ ಪತ್ತೆಯಾಗಿದ್ದು, ಹಲವು ದೇಶಗಳು ಬ್ರಿಟನ್ ನಿಂದ ಬರುವ ಮತ್ತು ಹೋಗುವ ವಿಮಾನಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ನವದೆಹಲಿ: ಬ್ರಿಟನ್ ನಲ್ಲಿ ರೂಪಾಂತರಗೊಂಡ ಮಹಾಮಾರಿ ಕೊರೋನಾ ವೈರಸ್ ನ ಹೊಸ ಪ್ರಭೇದ ಪತ್ತೆಯಾಗಿದ್ದು, ಹಲವು ದೇಶಗಳು ಬ್ರಿಟನ್ ನಿಂದ ಬರುವ ಮತ್ತು ಹೋಗುವ ವಿಮಾನಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಈಗ ಭಾರತ ಸಹ ಬ್ರಿಟನ್‌ನ ಎಲ್ಲಾ ವಿಮಾನಗಳನ್ನು ನಿಷೇಧಿಸಿದೆ.

ಬ್ರಿಟನ್ ನಲ್ಲಿ ಚಾಲ್ತಿಯಲ್ಲಿರುವ ಕೊರೋನಾ ಪರಿಸ್ಥಿತಿಯನ್ನು ಪರಿಗಣಿಸಿ ಯುಕೆ ಯಿಂದ ಭಾರತಕ್ಕೆ ಬರುವ ಎಲ್ಲಾ ವಿಮಾನಗಳನ್ನು 2020 ಡಿಸೆಂಬರ್ 31 ರವರೆಗೆ ಸ್ಥಗಿತಗೊಳಿಸಲು ಭಾರತ ಸರ್ಕಾರ ನಿರ್ಧರಿಸಿದೆ ಎಂದು ವಿಮಾನಯಾನ ಸಚಿವಾಲಯ ಸೋಮವಾರ ಟ್ವೀಟ್ ಮಾಡಿದೆ.

ಬ್ರಿಟನ್ ವಿಮಾನ ನಿಷೇಧ ಮಂಗಳವಾರ ರಾತ್ರಿ 11:59 ರಿಂದ ಜಾರಿಗೆ ಬರಲಿದೆ ಎಂದು ಸಚಿವಾಲಯ ತಿಳಿಸಿದೆ.

ಮುನ್ನೆಚ್ಚರಿಕೆಯ ಕ್ರಮವಾಗಿ, ವಿಮಾನಗಳಲ್ಲಿ ಬ್ರಿಟನ್‌ನಿಂದ ಆಗಮಿಸುವ ಎಲ್ಲಾ ಪ್ರಯಾಣಿಕರು ಆಗಮನದ ನಂತರ ಕಡ್ಡಾಯವಾಗಿ ಕೋವಿಡ್-19 ಪರೀಕ್ಷೆಗೆ ಒಳಪಡುತ್ತಾರೆ ಎಂದು ಸಚಿವಾಲಯ ಹೇಳಿದೆ.

ಬ್ರಿಟನ್ ಬೃಹತ್ ಭಾರತೀಯ ವಲಸೆಗಾರರ ನೆಲೆಯಾಗಿದ್ದು, ಲಂಡನ್ ಮತ್ತು ನವದೆಹಲಿ ಮತ್ತು ಲಂಡನ್ - ಮುಂಬೈ ನಡುವೆ ನಿತ್ಯ ನೂರಾರು ಜನರನ್ನು ಕರೆದೊಯ್ಯುವ ಹಲವಾರು ವಿಮಾನಗಳಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

SCROLL FOR NEXT