ನಾಳೆ ಭಾರತ ಅಂತರರಾಷ್ಟ್ರೀಯ ವಿಜ್ಞಾನ ಉತ್ಸವ ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ ಡಿ.22 ರಂದು ಭಾರತ ಅಂತರರಾಷ್ಟ್ರೀಯ ವಿಜ್ಞಾನ ಉತ್ಸವ ಉದ್ಘಾಟಿಸಲಿದ್ದಾರೆ ಎಂದು ಕೇಂದ್ರ ಸಚಿವ ಹರ್ಷವರ್ಧನ್ ತಿಳಿಸಿದ್ದಾರೆ.
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಡಿ.22 ರಂದು ಭಾರತ ಅಂತರರಾಷ್ಟ್ರೀಯ ವಿಜ್ಞಾನ ಉತ್ಸವ ಉದ್ಘಾಟಿಸಲಿದ್ದಾರೆ ಎಂದು ಕೇಂದ್ರ ಸಚಿವ ಹರ್ಷವರ್ಧನ್ ತಿಳಿಸಿದ್ದಾರೆ.
ಸ್ವಾವಲಂಬಿ ಭಾರತ ಹಾಗೂ ಜಾಗತಿಕ ಅಭ್ಯುದಯ ಎಂಬುದು ಈ ಬಾರಿಯ ಉತ್ಸವದ ಥೀಮ್ ಆಗಿರಲಿದೆ. ಡಿ.25 ರಂದು ಖ್ಯಾತ ಗಣಿತಜ್ಞ ಶ್ರೀನಿವಾಸ ರಾಮಾನುಜಮ್ ಹಾಗೂ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನದಂದು ಮುಕ್ತಾಯಗೊಳ್ಳಲಿದ್ದು ಸಮಾರೋಪ ಸಮಾರಂಭದಲ್ಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಭಾಗಿಯಾಗಲಿದ್ದಾರೆ.
ಮೂರು ದಿನಗಳ ಅವಧಿಯಲ್ಲಿ ಹಲವಾರು ರಾಜಕೀಯ ನಾಯಕರು ಭಾಗಿಯಾಗಲಿದ್ದಾರೆ ಎಂದು ಹರ್ಷವರ್ಧನ್ ತಿಳಿಸಿದ್ದಾರೆ.
ಯುವಜನತೆಗೆ 21 ನೇ ಶತಮಾದ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಿಕೊಳ್ಳುವುದಕ್ಕೆ ಸಹಾಯ ಮಾಡುವುದೇ ಐಐಎಸ್ಎಫ್2020 ರ ಉದ್ದೇಶವಾಗಿದೆ ಎಂದು ಹರ್ಷವರ್ಧನ್ ತಿಳಿಸಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.