ಸಂಗ್ರಹ ಚಿತ್ರ 
ದೇಶ

ಸಿಸ್ಟರ್ ಅಭಯಾ ಕೊಲೆ ಪ್ರಕರಣ: ಫಾದರ್ ಥಾಮಸ್, ಸೆಫಿ ತಪ್ಪಿತಸ್ಥರು; ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು

ಕೇರಳ ರಾಜ್ಯದಲ್ಲಿ ತೀವ್ರ ಕೋಲಾಹಲ ಸೃಷ್ಟಿಸಿದ್ದ ಸಿಸ್ಟರ್ ಅಭಯಾ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ತಿರುವನಂತಪುರಂ ಸಿಬಿಐ ವಿಶೇಷ ನ್ಯಾಯಾಲಯ ಮಂಗಳವಾರ ತೀರ್ಪು ಪ್ರಕಟಿಸಿದ್ದು, ಪ್ರಮುಖ ಆರೋಪಿಗಳಾದ ಫಾದರ್ ಥಾಮಸ್, ಸಿಸ್ಟರ್ ಸೆಫಿ ಇಬ್ಬರೂ ತಪ್ಪಿತಸ್ಥರು ಎಂದು ಹೇಳಿದೆ.

ತಿರುವನಂತಪುರ: ಕೇರಳ ರಾಜ್ಯದಲ್ಲಿ ತೀವ್ರ ಕೋಲಾಹಲ ಸೃಷ್ಟಿಸಿದ್ದ ಸಿಸ್ಟರ್ ಅಭಯಾ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ತಿರುವನಂತಪುರಂ ಸಿಬಿಐ ವಿಶೇಷ ನ್ಯಾಯಾಲಯ ಮಂಗಳವಾರ ತೀರ್ಪು ಪ್ರಕಟಿಸಿದ್ದು, ಪ್ರಮುಖ ಆರೋಪಿಗಳಾದ ಫಾದರ್ ಥಾಮಸ್, ಸಿಸ್ಟರ್ ಸೆಫಿ ಇಬ್ಬರೂ ತಪ್ಪಿತಸ್ಥರು ಎಂದು ಹೇಳಿದೆ.

1992ರ ಮಾರ್ಚ್ 27ರಂದು ಕೊಟ್ಟಾಯಂ ಪಯಸ್ ಟೆನ್ತ್ ಕಾನ್ವೆಂಟ್‌ನ ಬಾವಿಯಲ್ಲಿ 19 ವರ್ಷ ವಯಸ್ಸಿನ ಸಿಸ್ಟರ್ ಅಭಯಾ ಶವ ಪತ್ತೆಯಾಗಿತ್ತು. ಇದು ಆತ್ಮಹತ್ಯೆ ಪ್ರಕರಣ ಎಂದು ಸ್ಥಳೀಯ ಪೊಲೀಸರು ಪ್ರಕರಣ ಮುಚ್ಚಿಹಾಕಲು ಯತ್ನಿಸಿದ್ದರು.

ಆದರೆ ಅಂದಿನ ಕೊಟ್ಟಾಯಂ ನಗರಸಭೆ ಚೇರ್ಮನ್ ಪಿಸಿ ಚೆರಿಯನ್ ಮಡುಕ್ಕನಿ ಮತ್ತು ಮಾನವ ಹಕ್ಕುಗಳ ಹೋರಾಟಗಾರ ಜೋಮೋನ್ ಪುತ್ತನ್ ಪುರಕಲ್ ಅವರು ಈ ಪ್ರಕರಣವನ್ನು ಕೋರ್ಟಿಗೆ ಮನವಿ ಮಾಡಿದ್ದರು.

ನಂತರ ಪ್ರಕರಣದ ತನಿಖೆಯನ್ನು ಕ್ರೈಂ ಬ್ರಾಂಚ್‌ಗೆ ವರ್ಗಾಯಿಸಲಾಗಿತ್ತು. ಆದರೆ ಕ್ರೈಂ ಬ್ರಾಂಚ್‌ ಪೊಲೀಸರು ಕೂಡಾ ಅಭಯಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಷರಾ ಹಾಕಿದರು. 1993 ಮಾರ್ಚ್ 29ಕ್ಕೆ ತನಿಖೆಯನ್ನು ಸಿಬಿಐ ವಹಿಸಿಕೊಂಡಿತು.

ಪ್ರಕರಣ ಸಂಬಂಧ ಫಾದರ್ ಥಾಮಸ್ ಎಂ.ಕೊಟ್ಟೂರ್( ಆರೋಪಿ 1), ಫಾದರ್ ಜೋಸ್ ಪೂತೃಕ್ಕಯಿಲ್, ಸಿಸ್ಟರ್ ಸೆಫಿ ಬಂಧಿಸಲಾಗಿತ್ತು. ಆದರೆ, ಎಲ್ಲರಿಗೂ ಜಾಮೀನು ಸಿಕ್ಕಿತ್ತು, 2018ರಲ್ಲಿ ಫಾದರ್ ಜೋಸ್ ಪೂತೃಕ್ಕಯಿಲ್ ಪ್ರಕರಣದಿಂದ ಖುಲಾಸೆಗೊಂಡಿದ್ದರು.

1992ರ ಮಾರ್ಚ್ 27ರಂದು ಕಾನ್ವೆಂಟ್ ರೂಮೊಂದರಲ್ಲಿ ಸಿಸ್ಟರ್ ಸೆಫಿ ಹಾಗೂ ಥಾಮಸ್ ಎಂ.ಕೊಟ್ಟೂರ್ ಇಬ್ಬರ ನಡುವೆ ನಿಕಟ ಸಂಪರ್ಕವಿದ್ದುದ್ದನ್ನು ಅಕಸ್ಮಿಕವಾಗಿ ಅಭಯಾ ನೋಡಿದ್ದಾರೆ. ನಂತರ ಕೊಟ್ಟೂರ್, ಜೋಸ್ ಹಾಗೂ ಸೆಫಿ ಸೇರಿಕೊಂಡು ಅಭಯಾರನ್ನು ಕೊಚ್ಚಿ ಕೊಂದು, ಬಾವಿಗೆ ಎಸೆದಿದ್ದರು ಎಂದು ಸಿಬಿಐ ತನ್ನ ದೋಷಾರೋಪಣ ಪಟ್ಟಿಯಲ್ಲಿ ಹೇಳಿತ್ತು. ಈ ಪ್ರಕರಣ ಕೇರಳ ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿತ್ತು. 

ಪ್ರಕರಣ ಸಂಬಂಧ ಇದೀಗ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದ್ದು, ಫಾದರ್ ಥಾಮಸ್, ಸಿಸ್ಟರ್ ಸೆಫಿ ಇಬ್ಬರು ದೋಷಿಗಳೆಂದು ಹೇಳಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

26 ಸೆಕೆಂಡ್ ನಲ್ಲೇ ಗ್ರೇಟ್ ಎಸ್ಕೇಪ್; ಮೃಗಾಲಯ ವೀಕ್ಷಣೆಗೆ ಬಂದ ಜೋಡಿ, ಗಂಡ ಬೈಕ್ ಪಾರ್ಕ್ ಮಾಡೋ ಗ್ಯಾಪಲ್ಲಿ 'ಲವರ್ ಜೊತೆ ಪತ್ನಿ ಪರಾರಿ'! Video ವೈರಲ್!

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!

ರಾಜಸ್ಥಾನದ ವಿಚಿತ್ರ ಪ್ರಕರಣ: ಮಕ್ಕಳ ಆರೈಕೆ, ಮನೆ ಸ್ವಚ್ಛತೆಗೆ ಕೈದಿಗಳ ಬಳಕೆ; ಕೊನೆಗೆ ಅದೇ ಜೈಲು ಸೇರಿದ ಅಜ್ಮೀರ್ ಮಹಿಳಾ ಜೈಲರ್‌!